HD Kumaraswamy ವರ್ತುಲ ರಸ್ತೆ ಯೋಜನೆ ತ್ವರಿತ ಅನುಷ್ಠಾನ: ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ವರದಾನ..!

ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರು ನಗರದ ವಾಹನ ದಟ್ಟಣೆ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆ (ಎಸ್‌ಟಿಆರ್‌ಆರ್) ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಕೇಂದ್ರದ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ಬುಧವಾರ ಸಚಿವ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿಯೇ ಭೇಟಿಯಾದ ಕುಮಾರಸ್ವಾಮಿ ಅವರು; ನೆನೆಗುದಿಗೆ ಬಿದ್ದಿದ್ದ ಈ ಯೋಜನೆಗೆ ಸಚಿವರಲ್ಲಿ ಮನವಿ ಮಾಡಿದರು.

ಕುಮಾರಸ್ವಾಮಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಗಡ್ಕರಿ ಅವರು; ಆದಷ್ಟು ಬೇಗ ಯೋಜನೆಯ ಪ್ರಸ್ತಾವನೆಯನ್ನು ‘ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮೌಲ್ಯಮಾಪನ ಸಮಿತಿ’ (Public Private Partnership Appraisal Committee – PPPAC) ಮುಂದೆ ಮಂಡಿಸಿ ತ್ವರಿತವಾಗಿ ಅನುಷ್ಠಾನಗೊಳಿಸುವುಕ್ಕೆ ಸಹಕರಿಸುವುದಾಗಿ ಭರವಸೆ ನೀಡಿದರು.

ಏನಿದು ಉಪನಗರ ವರ್ತುಲ ರಸ್ತೆ?

ಉಪನಗರ ವರ್ತುಲ ರಸ್ತೆ ಯೋಜನೆ (Satellite Town Ring Road-STRR) 2013ರಲ್ಲಿಯೇ ಚಾಲನೆ ಪಡೆದಿತ್ತು. ಆದರೆ, ನಾನಾ ಕಾರಣಗಳಿಂದ ಅದು ನೆನೆಗುದಿಗೆ ಬಿದ್ದಿತ್ತು. ಬೆಂಗಳೂರು ಸುತ್ತಮುತ್ತ ಇರುವ ಎಂಟು ಕೈಗಾರಿಕಾ ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ.

ನಾಲ್ಕರಿಂದ ಆರು ಪಥಗಳ ಈ ಯೋಜನೆಯು ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ದೇವನಹಳ್ಳಿ, ಸೂಲಿಬೆಲೆ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ ಮತ್ತು ಮಾಗಡಿ ಸೇರಿದಂತೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಉಪನಗರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಹಾಗೂ ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೈವೇಯನ್ನು ಕೂಡುತ್ತದೆ. ಜತೆಗೆ ತಮಿಳುನಾಡಿನ ಹೊಸೂರನ್ನೂ ಸಂಪರ್ಕಿಸುತ್ತದೆ.

ಈ ಉಪನಗರ ವರ್ತುಲ ರಸ್ತೆಯನ್ನು ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್ ಹೆದ್ದಾರಿಯ ಸಂಪರ್ಕಗೊಳಿಸಲಾಗುವುದು. ಕೈಗಾರಿಕೆಗಳಿಗೆ ಸರಕು ಸರಂಜಾಮು ಸಾಗಿಸುವ ಯಾವುದೇ ಬೃಹತ್ ವಾಹನ ಬೆಂಗಳೂರು ನಗರದೊಳಕ್ಕೆ ಪ್ರವೇಶ ಮಾಡದಂತೆ ತಡೆಯುವುದೇ ಈ ಯೋಜನೆಯ ಉದ್ದೇಶವಾಗಿದೆ.

2018ರಿಂದ ನೆನೆಗುದಿಗೆ ಬಿದ್ದಿದ್ದ ಉಪನಗರ ಹೊರ ವರ್ತುಲ ರಸ್ತೆ ಯೋಜನೆಗೆ ಗಡ್ಕರಿ ಅವರ ಒಪ್ಪಿಗೆ ಹಾಗೂ ಕುಮಾರಸ್ವಾಮಿ ಅವರ ಒಪ್ಪಿಗೆಯೊಂದಿಗೆ ಮೋಕ್ಷ ಸಿಕ್ಕಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳಿಗೆ ಈ ಯೋಜನೆಯಿಂದ ಹೆಚ್ಚು ಲಾಭವಾಗಲಿದೆ. ಮುಖ್ಯವಾಗಿ ಬೆಂಗಳೂರು ನಗರದ ಮೇಲೆ ಸಂಚಾರದ ಒತ್ತಡ ಕಡಿಮೆ ಆಗಲಿದೆ.

ಕುಮಾರಸ್ವಾಮಿ ಅವರು ಹೇಳಿದ್ದೇನು?

ಎಂಟು ವರ್ಷಗಳಿಂದ ಬಾಕಿ ಇದ್ದ ಭೂಸ್ವಾಧೀನ ಪರಿಹಾರದ ಹಣವನ್ನು ಕೂಡಲೇ ರೈತರಿಗೆ ಪಾವತಿ ಮಾಡಲು ಸಚಿವ ಗಡ್ಕರಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಭೂಮಿ ಕಳೆದುಕೊಂಡಿರುವ ರೈತರಿಗೆ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಈ ಯೋಜನೆಯು ಕರ್ನಾಟಕ ರಾಜ್ಯದಲ್ಲಿ ಸುಮಾರು 135 ಕಿ.ಮೀ. ದೂರ ಹಾದು ಹೋಗಲಿದ್ದು, ಯೋಜನೆಯ ಸುಮಾರು ₹4,750 ಕೋಟಿ ವೆಚ್ಚದಲ್ಲಿ ಕಾರ್ಯಗತ ಆಗುತ್ತಿದೆ. 4 ರಿಂದ 6 ಪಥ ಹೊಂದಿರುವ ಸಂಪೂರ್ಣ ನಿಯಂತ್ರಿತ ಪ್ರವೇಶ ವ್ಯವಸ್ಥೆಯನ್ನು ಹೊಂದಿರುವ ಈ ಹೆದ್ದಾರಿಯು ಯಾವುದೇ ಅಡೆತಡೆಗಳಿಲ್ಲದೆ ಸಂಚಾರ ಸೌಲಭ್ಯ ಕಲ್ಪಿಸಲಿದೆ. ಬೆಂಗಳೂರು ಸುತ್ತಲಿನ ಉಪ ನಗರಗಳ ಮೂಲಕ ರಸ್ತೆ ಹಾದು ಹೋಗಲಿದೆ. ಇದು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲಿದೆ ಎಂದು ಅಂದಾಜಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೈಗೊಂಡಿರುವ ಮಹತ್ವಾಕಾಂಕ್ಷೆಯ ಯೋಜನೆ ಇದಾಗಿದ್ದು, ಕೈಗಾರಿಕಾಭಿವೃದ್ಧಿಗೆ ಬಹುದೊಡ್ಡ ಕೊಡುಗೆ ನೀಡಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಇದೆಲ್ಲಾ ಸಾಧ್ಯವಾಗುತ್ತಿದೆ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ನಿತಿನ್ ಗಡ್ಕರಿ ಅವರು ತೋರಿದ ಬದ್ಧತೆ ಅಭಿನಂದನಾರ್ಹ ಎಂದು ಕುಮಾರಸ್ವಾಮಿ ಅವರು ಹೇಳಿದರು.

ರಾಜಕೀಯ

Doddaballapura: ದೊಡ್ಡಬಳ್ಳಾಪುರಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಭೇಟಿ

Doddaballapura: ದೊಡ್ಡಬಳ್ಳಾಪುರಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಭೇಟಿ

ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳಿಂದ, ನಾಡಿನ ಜನತೆ ನೆಮ್ಮದಿಯಿಂದ ಊಟ ಮಾಡುವಂತಾಗಿದೆ. Doddaballapura

[ccc_my_favorite_select_button post_id="100532"]
Doddaballapura: ಜ.11ರಂದು ದಿ.ಹೆಚ್.ಅಪ್ಪಯ್ಯಣ್ಣ ನುಡಿ ನಮನ: ಬಿ.ಮುನೇಗೌಡ ಆಹ್ವಾನ

Doddaballapura: ಜ.11ರಂದು ದಿ.ಹೆಚ್.ಅಪ್ಪಯ್ಯಣ್ಣ ನುಡಿ ನಮನ: ಬಿ.ಮುನೇಗೌಡ ಆಹ್ವಾನ

ಸುಮಾರು ನಾಲ್ಕು ದಶಕಗಳ ಕಾಲ ರಾಜಕಾರಣದಲ್ಲಿದ್ದ ಅಪ್ಪಯ್ಯಣ್ಣನವರು Doddaballapura

[ccc_my_favorite_select_button post_id="100537"]
Tirupati| ತಿರುಪತಿಯಲ್ಲಿ ಘನ ಘೋರ ದುರಂತ; ಕರ್ನಾಟಕ ಮೂಲದ ಮಹಿಳೆ ಸಾವು..! Video

Tirupati| ತಿರುಪತಿಯಲ್ಲಿ ಘನ ಘೋರ ದುರಂತ; ಕರ್ನಾಟಕ ಮೂಲದ ಮಹಿಳೆ ಸಾವು..! Video

ಏಕಾಏಕಿ ಸಾವಿರಾರು ಮಂದಿ ನುಗ್ಗಿದ ಪರಿಣಾಮ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ tirupati

[ccc_my_favorite_select_button post_id="100515"]
California; ಭೀಕರ ಕಾಡ್ಗಿಚ್ಚು: ಮನೆ, ವಾಹನ ಭಸ್ಮ..!| Video ನೋಡಿ

California; ಭೀಕರ ಕಾಡ್ಗಿಚ್ಚು: ಮನೆ, ವಾಹನ ಭಸ್ಮ..!| Video ನೋಡಿ

Pacific Palisade fire made Southern California look like an absolute Horror movie. Everyone is FORCED to evacuate, They are out of Water, Fighter Fighters, The wind is so strong that Tunker

[ccc_my_favorite_select_button post_id="100450"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Murder: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

Murder: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆಗೈದ ಪಾಪಿ

ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಆರೋಪಿ ಗಂಗರಾಜುವನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. Murder

[ccc_my_favorite_select_button post_id="100474"]
Accident: ಓಂ ಶಕ್ತಿ ದರ್ಶನ ಮುಗಿಸಿ ಬರುವ ವೇಳೆ ಭೀಕರ ಅಪಘಾತ.. 4 ಸಾವು..!

Accident: ಓಂ ಶಕ್ತಿ ದರ್ಶನ ಮುಗಿಸಿ ಬರುವ ವೇಳೆ ಭೀಕರ ಅಪಘಾತ.. 4

ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. Accident

[ccc_my_favorite_select_button post_id="100523"]

ಆರೋಗ್ಯ

ಸಿನಿಮಾ

Doctorate: ಖ್ಯಾತ ನಟಿ ತಾರಾ ಸೇರಿ 3 ಮಂದಿಗೆ ಡಾಕ್ಟರೇಟ್ ಗೌರವ..!

Doctorate: ಖ್ಯಾತ ನಟಿ ತಾರಾ ಸೇರಿ 3 ಮಂದಿಗೆ ಡಾಕ್ಟರೇಟ್ ಗೌರವ..!

ಸಿನಿಮಾ ಕ್ಷೇತ್ರದ ಸಾಧನೆಗಾಗಿ ತಾರಾ ಅವರಿಗೆ ವಿವಿಯ ಕುಲಾಧಿಪತಿ Doctorate

[ccc_my_favorite_select_button post_id="100512"]
error: Content is protected !!