Site icon ಹರಿತಲೇಖನಿ

Gruhalakshmi: ಗೃಹಲಕ್ಷ್ಮಿಯರಿಗೆ ಸಂಕ್ರಾಂತಿ ಗಿಫ್ಟ್..!

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಕೊಡುಗೆಯನ್ನು ನೀಡಲಿದ್ದು, ಗೃಹಲಕ್ಷ್ಮಿ (Gruhalakshmi) ಯೋಜನೆಯಡಿ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ಬರುತ್ತಿರುವ ಎರಡು ಸಾವಿರ ರೂಪಾಯಿ 16 ನೇ ಕಂತಿನ ಹಣ ಜನವರಿ 14 ರಿಂದ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ.

ಗೃಹಲಕ್ಷ್ಮಿಯ ಯೋಜನೆಯ ಡಿಸೆಂಬರ್ ತಿಂಗಳ ಕಂತಿನ ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಹಣವನ್ನು ಆರ್ಥಿಕ ಇಲಾಖೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ.

ಜನವರಿ 14ರಿಂದ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂದು ವರದಿಯಾಗಿದೆ.

ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾ‌ರ್ ಸೀಡಿಂಗ್ ಮಾಡಿಸಬೇಕು ಇದರ ಜೊತೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.

Exit mobile version