Tirupati| ತಿರುಪತಿಯಲ್ಲಿ ಕಾಲ್ತುಳಿತ.. ಆರು ಮಂದಿ ದುರ್ಮರಣ..!| Video ನೋಡಿ

ತಿರುಪತಿ: ಪ್ರಸಿದ್ದ ತಿರುಪತಿ (Tirupati) ದೇವಸ್ಥಾನದ ವೈಕುಂಠದ್ವಾರ ದರ್ಶನದ ಟೋಕನ್ ಪಡೆದುಕೊಳ್ಳುವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಮೃತರಲ್ಲಿ ಮೂವರು ಮಹಿಳೆಯರಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ವೈಕುಂಠ ದ್ವಾರ ದರ್ಶನವು ಜನವರಿ 10ರಿಂದ 10 ದಿನಗಳವರೆಗೆ ಇರಲಿದೆ. ಇದಕ್ಕಾಗಿ ದೇಶದ ವಿವಿಧೆಡೆಗಳಿಂದ ನೂರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು. ಟಿಕೆಟ್‌ಗಾಗಿ ಸುಮಾರು 4 ಸಾವಿರಕ್ಕೂ ಹೆಚ್ಚು ಭಕ್ತರು ಬುಧವಾರ ಬೆಳಗ್ಗೆಯಿಂದಲೇ ವಿವಿಧ ಟಿಕೆಟ್ ಕೇಂದ್ರಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು.

ಭಾರೀ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ವಿಷ್ಣು ನಿವಾಸದಲ್ಲಿ ‘ವೈಕುಂಠ ದ್ವಾರ ಸರ್ವ ದರ್ಶನ’ ಟೋಕನ್ ಪಡೆಯಲು ಯತ್ನಿಸಿದಾಗ ನೂಕುನುಗ್ಗಲು ಉಂಟಾಗಿದೆ. ಶ್ರೀನಿವಾಸಂ, ಬೈರಾಗಿಪಟೇಡ ರಾಮ ನಾಯ್ಡು ಶಾಲೆ, ಸತ್ಯನಾರಾಯಣಪುರಂ ಮುಂತಾದ ಕಡೆ ಕಾಲ್ತುಳಿತ ಸಂಭವಿಸಿದೆ.

ಸ್ಥಳದಲ್ಲಿ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗೆ ಸಾಗಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರವಾಗಿವೆ.

ಘಟನೆಗೆ ಸಂಬಂಧಿಸಿ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಆರ್.ನಾಯ್ಡು ಅವರು ತುರ್ತು ಸಭೆ ನಡೆಸಿದ್ದಾರೆ.

ಕಾಲ್ತುಳಿತಕ್ಕೆ ಕಾರಣವೇನು?

ಗುರುವಾರ ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್‌ ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಹೊರಗೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೊಂದು ಮೂಲದ ಪ್ರಕಾರ, ಗುರುವಾರ ಮುಂಜಾನೆ 5 ಗಂಟೆಯ ಬದಲು ಮಧ್ಯರಾತ್ರಿ 12 ಗಂಟೆಯಿಂದಲೇ ಟಿಕೆಟ್ ವಿತರಣೆ ಆರಂಭವಾಗಲಿದೆ ಎನ್ನುವ ಮಾಹಿತಿ ಹರಿದಾಡಿದೆ. ಈ ವೇಳೆ ಸಾವಿರಾರು ಮಂದಿ ಏಕಕಾಲಕ್ಕೆ ಕೌಂಟರ್ ಬಳಿ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ ಎಂಬ ಮಾಹಿತಿ ವರದಿಯಾಗಿದೆ.

ರಾಜಕೀಯ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ

[ccc_my_favorite_select_button post_id="104120"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!

ದೊಡ್ಡಬಳ್ಳಾಪುರ (Doddaballapura): ನೇಣು ಬೀಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಸಾಸಲು ಹೋಬಳಿಯ ಗರಿಕೇನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು 40 ವರ್ಷದ ಗಂಗರತ್ನಮ್ಮ ಎಂದು ಗುರುತಿಸಲಾಗಿದೆ. ಆರೂಢಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೃತಳು, ನಿನ್ನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ.

[ccc_my_favorite_select_button post_id="104116"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!