ದೊಡ್ಡಬಳ್ಳಾಪುರ: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಜೂರು – ಮಾಕಳಿ ನಡುವೆ ಸಂಭವಿಸಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಗುಂಜೂರು ನಿವಾಸಿ ಗೋವಿಂದ ರಾಜ್ ಎನ್ನುವವರಿಗೆ ತೀವ್ರ ಪೆಟ್ಟಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಮೂರು ದಿನಗಳಿಂದ ಲಾರಿ ರಸ್ತೆಯಲ್ಲಿಯೇ ಕೆಟ್ಟು ನಿಂತಿದೆ ಎನ್ನಲಾಗಿದ್ದು, ಇಂದು ಸಂಜೆ ದೊಡ್ಡಬಳ್ಳಾಪುರದಿಂದ ಗುಂಜೂರಿಗೆ ತೆರಳುವ ವೇಳೆ ಎದುರು ಬಂದ ವಾಹನದ ಬೆಳಕಿಗೆ ನಿಂತಿರುವ ಲಾರಿ ಕಾಣದೆ ಡಿಕ್ಕಿ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.