ದೊಡ್ಡಬಳ್ಳಾಪುರ, (Doddaballapura): ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಸ್ವ-ಸಹಾಯ ಸಂಘದ ಸದಸ್ಯರಿಗೆ ತಾಲೂಕಿನ ಹೊಸಹಳ್ಳಿಯಲ್ಲಿ ಫುಡ್ ಪ್ರೊಸೆಸಿಂಗ್ (ಆಹಾರ ಸಂಸ್ಕರಣ) ಕುರಿತು 30 ದಿನಗಳ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಾಗಾರವನ್ನು ತಾಲೂಕು ಪಂಚಾಯಿತಿ ಇಒ ಮುನಿರಾಜು.ಎನ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಮಹಿಳೆಯರು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ NRLM- ಸಂಜೀವಿನಿ ಯೋಜನೆಯ ಸದುಪಯೋಗವನ್ನು ಪಡೆದುಕೊಂಡು, ಕೌಶಲ್ಯಗಳ ಮೂಲಕ ಜೀವನೋಪಾಯವನ್ನು ಕಟ್ಟಿಕೊಳ್ಳಬೇಕು ಹಾಗೂ ಗ್ರಾಮೀಣ ಭಾಗದ ಮಹಿಳೆಯರು ಸಮಾಜದಲ್ಲಿ ಎಲ್ಲಾ ರಂಗದಲ್ಲಿಯೂ ಬೆಳವಣಿಗೆಯನ್ನು ಹೊಂದಬೇಕು ಎಂದರು.
ಈ ಸಂದರ್ಭದಲ್ಲಿ ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ನಾಗರತ್ನಮ್ಮ, ಕರವಸೂಲಿಗಾರ ನವೀನ್ ಕುಮಾರ್, ಶ್ರೀ ಲಕ್ಷ್ಮೀ ವೆಂಕಟೇಶ್ವರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷೆ ಸೌಭಾಗ್ಯಮ್ಮ, ಜಿಲ್ಲಾ ಯೋಜನಾ ಸಂಯೋಜಕ ಪ್ರವೀಣ್, ವ್ಯವಸ್ಥಾಪಕಿ ಚೈತ್ರ ಸಿ.ಎಂ., ವ್ಯವಸ್ಥಾಪಕ ಶ್ರೀನಿವಾಸ್ ಎಂ, ವಲಯ ಮೇಲ್ವಿಚಾರಕ ಶ್ರೀನಿವಾಸ್.ಎನ್.ಜಿ., ವಲಯ ಮೇಲ್ವಿಚಾರಕಿ (ಕೌಶಲ್ಯ) ಳ ಮಂಜುಳಾ, ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಸುಧಾ ಮತ್ತು ಒಕ್ಕೂಟದ ಸಿಬ್ಬಂದಿಗಳು ಇದ್ದರು.