ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಆಶಾ (ASHA) ಕಾರ್ಯಕರ್ತೆಯರನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿಯಾಗಿ ಮನವಿ ಪತ್ರ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಅವರು, ಮುಂಬರುವ ಬಜೆಟ್ ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.
ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8000 ರೂಪಾಯಿ ಖಚಿತ ಗೌರವಧನದ ಬದಲಾಗಿ 9500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರ್ಕಾರ ಸಿದ್ಧವಿದೆ ಎಂದು ಪ್ರತಿಭಟನಾಕಾರರಿಗೆ ತಿಳಿಸಿದರು.
ಇನ್ನು, ಆಶಾ ಕಾರ್ಯಕರ್ತೆಯರಿಗೆ ರಜೆಗಳನ್ನು ನಿಗದಿ ಮಾಡುವ ನಿಟ್ಟಿನಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿ, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸಲು ಸಹಕಾರ ನೀಡುವಂತೆ ಮನವಿ ಮಾಡಿದರು.