ತಿರುಪತಿ: ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ (Tirupati) ದೇವಸ್ಥಾನದಲ್ಲಿ ನಿನ್ನೆ ಸಂಭವಿಸಿದ ಕಾಲ್ತುಳಿತ ತೀವ್ರ ದುಃಖ ತಂದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ತಿರುಪತಿಯಲ್ಲಿ ಸಂಭವಿಸಿದ ದುರಂತ ತೀವ್ರ ದುಃಖವನ್ನುಂಟುಮಾಡಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡ ಎಲ್ಲರೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.
ಈ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ನೆರವು ನೀಡಿ ಎಂದು ಬರೆದಿದ್ದಾರೆ.
ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ ಬುಧವಾರ ರಾತ್ರಿ ‘ವೈಕುಂಠ ದ್ವಾರ ದರ್ಶನ’ದ ಟೋಕನ್ ಪಡೆದುಕೊಳ್ಳುವಾಗ ನೂರಾರು ಜನರು ಒಟ್ಟಿಗೆ ಮುಗಿಬಿದ್ದ ಕಾರಣ ಉಂಟಾದ ಕಾಲ್ತುಳಿತದಲ್ಲಿ ಆರು ಮಂದಿ ಭಕ್ತರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ.
ಇದನ್ನು ಓದಿ: Tirupati| ತಿರುಪತಿಯಲ್ಲಿ ಕಾಲ್ತುಳಿತ.. ಆರು ಮಂದಿ ದುರ್ಮರಣ..!| Video ನೋಡಿ