ಬೆಂಗಳೂರು; ಅಶ್ಲೀಲ ಸಂದೇಶ ಕಳಿಸಿದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ (Darshan) ಅವರು ಇಂದು ಬೆಂಗಳೂರಿನ ಸಿಸಿಎಚ್ 57ರ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ದರ್ಶನ್, ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಸೇರಿದಂತೆ ಹಲವರು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಂದರ್ಭದಲ್ಲಿ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಶುಕ್ರವಾರ ನ್ಯಾಯಾಧೀಶರೆದುರು ಹಾಜರಾದರು.
ಬಳಿಕ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದ್ದಾರೆ.
ನಟ ದರ್ಶನ್ ತಮ್ಮ ಆಪ್ತ, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ಅವರೊಟ್ಟಿಗೆ ವಕೀಲರು ಸಹ ಇದ್ದರು.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾದ ಬಳಿಕ ಇದೇ ಮೊದಲ ಬಾರಿಗೆ ದರ್ಶನ್ ಹಾಗೂ ಪವಿತ್ರಾ ಗೌಡ ನ್ಯಾಯಾಲಯದಲ್ಲಿ ಮುಖಾಮುಖಿಯಾದರು.
ನ್ಯಾಯಾಲಯಕ್ಕೆ ದರ್ಶನ್ ತೆರಳುವ ವೇಳೆ ಅಭಿಮಾನಿಯೋರ್ವ ಬಾಸ್ ಎಂದು ಕೈಯಾಡಿಸಿದರು. ಕೂಡಲೇ ತಿರುಗಿ ನೋಡಿದ ನಟ ದರ್ಶನ್ ಮುಗುಳ್ನೆಗೆ ಬೀರಿ ಮುಂದಕ್ಕೆ ಸಾಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.