Harithalekhani

ಸಂಕ್ರಾಂತಿ ಸಂಭ್ರಮದಲ್ಲಿ ನಟ ದರ್ಶನ್ ದರ್ಶನ..! ಅಭಿಮಾನಿಗಳು ಫುಲ್ ಖುಷ್

Actor Darshan in Sankranti celebrations..! Fans are full of joy

ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದ ನಂತರ ಹೊರ ಬಂದಿರುವ ನಟ ದರ್ಶನ್ (Darshan) ಅವರು ಇಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮೊದಲ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

2025 ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಈ ದಿನದಂದು ನಟ ದರ್ಶನ್ ಶುಭಾಶಯಗಳನ್ನು ಮಾಡಿ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್‌ನಲ್ಲಿ ‘ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ’ ಎಂದು ಬರೆದಿದ್ದಾರೆ.

ಇಂದು ಮೈಸೂರು ಬಳಿಯ ಫಾರ್ಮ್‌ ಹೌಸ್‌ನಲ್ಲಿ ದರ್ಶನ್ ತನ್ನ ಪತ್ನಿ ಹಾಗೂ ಪುತ್ರನ ಜೊತೆ ಸಂಕ್ರಾಂತಿ ಹಬ್ಬವನ್ನು ಆಚರಿಸಿಕೊಂಡಿರುವ ನಟ ತನ್ನ ನೆಚ್ಚಿನ ಕುದುರೆ ಜೊತೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಬ್ಲಾಕ್ ಟೀ ಶರ್ಟ್ ಧರಿಸಿರುವ ದಾಸ ಫೋಟೋಗೆ ಖಡಕ್ ಲುಕ್ ಕೊಟ್ಟಿದ್ದಾರೆ.

ಸದ್ಯ ಇಷ್ಟು ದಿನ ದರ್ಶನ್ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದ ಅಭಿಮಾನಿಗಳು ಈ ಒಂದು ಪೋಸ್ಟ್‌ನಿಂದಾಗಿ ಫುಲ್ ಖುಷಿಯಾಗಿದ್ದಾರೆ. ಅಲ್ಲದೇ ನಿಮ್ಮ ಜೊತೆ ನಾವಿದ್ದೇವೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Exit mobile version