Site icon Harithalekhani

CT Ravi: ಲಕ್ಷ್ಮಿ ಹೆಬ್ಬಾಳ್ಕರ್‌ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಸಿಟಿ ರವಿ

City Ravi prayed for Lakshmi Hebbalkar's speedy recovery

City Ravi prayed for Lakshmi Hebbalkar's speedy recovery

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತವಾಗಿದ್ದು (Accident), ಸಚಿವ ಹಾಗೂ ಅವರ ಸಹೋದರ ಕೂದಲೆಳೆ ಅಂತರದಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ (Cmsiddaramaiah), ವಿಧಾನಪರಿಷತ್ ಸದಸ್ಯ ಸಿಟಿ ರವಿ (Ct Ravi) ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.

ನಾಯಿಯೊಂದು ಅಡ್ಡ ಬಂದ ಹಿನ್ನಲೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ.

ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ವೈದ್ಯರು ಹೇಳಿದ್ದಾರೆ.

ಸಿಎಂ ಹಾರೈಕೆ

ಸಂಪುಟ ಸಹೋದ್ಯೋಗಿಯಾದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ವಿಚಾರ ತಿಳಿಯಿತು.

ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಹೇಳಿದ್ದಾರೆ.

ಸಿಟಿ ರವಿ (CT Ravi) ಪ್ರಾರ್ಥನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅಪಘಾತದಲ್ಲಿ ಗಾಯಗೊಂಡಿರುವ ಕುರಿತು ಮಾಡಿರುವ ವಿಧಾನಪರಿಷತ್ ಸದಸ್ಯ ಸಿಟಿ ರವಿ ಟ್ವಿಟ್ ಮಾಡಿದ್ದು, ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಎಂದಿದ್ದಾರೆ.

ಇತ್ತೀಚಿನ ಇವರಿಬ್ಬರ ನಡುವೆ ಅಶ್ಲೀಲ ಪದ ಬಳಸಿದ್ದಾರೆಂಬ ಗಲಾಟೆ ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿತ್ತು. ಇದರ ನಡುವೆಯೂ ಸಿಟಿ ರವಿ (CT Ravi) ಅವರು ಅಪಘಾತಕ್ಕೆ ಒಳಗಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಮಾನವೀಯತೆ‌ ಮೆರೆದಿದ್ದಾರೆ.

Exit mobile version