ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಾರು ಅಪಘಾತವಾಗಿದ್ದು (Accident), ಸಚಿವ ಹಾಗೂ ಅವರ ಸಹೋದರ ಕೂದಲೆಳೆ ಅಂತರದಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆನ್ನಿಗೆ, ಕುತ್ತಿಗೆಗೆ ತೀವ್ರ ಪೆಟ್ಟು ಬಿದ್ದಿದೆ.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.
ನಾಯಿಯೊಂದು ಅಡ್ಡ ಬಂದ ಹಿನ್ನಲೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಕಾರು ಡಿಕ್ಕಿಯ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕೂಡಲೇ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ.
ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ವೈದ್ಯರು ಹೇಳಿದರು.