390 Crore Rs. Foundation stone laying for investment IBC Giga Factory

ದೇವನಹಳ್ಳಿಯಲ್ಲಿ 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: ಎಂಬಿ ಪಾಟೀಲ| IBC GIGA

ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ (IBC GIGA) ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ.

ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು ಎಂದಿದ್ದಾರೆ.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್-ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ.

ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.

ರಾಜಕೀಯ

ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ

ಸಿಎಂ ಜತೆ ಸ್ಯಾಫ್ರಾನ್ ಕಂಪನಿ ಅಧ್ಯಕ್ಷ ರಾಸ್ ಭೇಟಿ

ರಾಜ್ಯದ ಕೈಗಾರಿಕಾಸ್ನೇಹಿ ನೀತಿ, ಹೂಡಿಕೆ ಕಾರ್ಯಪರಿಸರ, ವಿಷನ್ ಗ್ರೂಪ್ ಚಟುವಟಿಕೆಗಳು ಇತ್ಯಾದಿಗಳನ್ನು ಕುರಿತು ವಿಚಾರ ವಿನಿಮಯ ನಡೆಸಲಾಯಿತು. Cmsiddaramaiah

[ccc_my_favorite_select_button post_id="101518"]
ನೇತಾಜಿ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ – ಸಿಎಂ

ನೇತಾಜಿ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ – ಸಿಎಂ

ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. Netaji

[ccc_my_favorite_select_button post_id="101504"]
ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌. monalisa

[ccc_my_favorite_select_button post_id="101378"]

Indian Army Day 2025: ಇತಿಹಾಸ, ಥೀಮ್,

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

ಮೊದಲ ದಿನದಿಂದಲೂ ಭಾರತ ಮಹಿಳಾ ತಂಡ ಚಾಂಪಿಯನ್ ಆಗಲಿದೆ ಎಂಬ ದೊಡ್ಡ ನಿರೀಕ್ಷೆಯಿತ್ತು. Kho kho world cup

[ccc_my_favorite_select_button post_id="101277"]
ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ..! ಜಾಮೀನು ರಹಿತ ವಾರಂಟ್ ಜಾರಿ

ರಾಮ್ ಗೋಪಾಲ್ ವರ್ಮಾಗೆ 3 ತಿಂಗಳು ಜೈಲು ಶಿಕ್ಷೆ..! ಜಾಮೀನು ರಹಿತ ವಾರಂಟ್

ಏಳು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಸಿದ ಅಂಧೇರಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. RGV

[ccc_my_favorite_select_button post_id="101511"]
ಕರ್ನಾಟಕ ಎಕ್ಸ್‌ಪ್ರೆಸ್ ಮಹಾ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ..!| Video

ಕರ್ನಾಟಕ ಎಕ್ಸ್‌ಪ್ರೆಸ್ ಮಹಾ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ..!| Video

ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಕಾರಣ, ಆ ರೈಲಿನಿಂದ ಜಿಗಿದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಪಕ್ಕದ ಹಳಿ ಮೇಲೆ ಬಂದ ಕರ್ನಾಟಕ ಎಕ್ಸ್ ಪ್ರೆಸ್ ರೈಲು ಹರಿದಿತ್ತು‌ train accident

[ccc_my_favorite_select_button post_id="101499"]

ಭೀಕರ ಅಪಘಾತ.. 10 ಮಂದಿ ದುರ್ಮರಣ.. 13

[ccc_my_favorite_select_button post_id="101428"]

Accident: ಮಂತ್ರಾಲಯ ಮಠದ 3 ವಿದ್ಯಾರ್ಥಿಗಳು ಸಾವು..!

[ccc_my_favorite_select_button post_id="101415"]

FROM DODDABALLAPURA RAILWAY POLICE: ರೈಲಿಗೆ ಸಿಲುಕಿ

[ccc_my_favorite_select_button post_id="101334"]

Accident| KSRTC ಬಸ್ ಪಲ್ಟಿ..!| Video

[ccc_my_favorite_select_button post_id="101321"]

ಭೀಕರ ಅಪಘಾತ.. ಚಾಲಕ ಗ್ರೇಟ್ ಎಸ್ಕೇಪ್..!

[ccc_my_favorite_select_button post_id="101304"]

Accident: ತೊಂಡೇಭಾವಿ ಬಳಿ‌ ಮತ್ತೆ ಭೀಕರ ಅಪಘಾತ..

[ccc_my_favorite_select_button post_id="101281"]

ಆರೋಗ್ಯ

ಸಿನಿಮಾ

2019ರ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್‌‌ಗೆ ಅತ್ಯುತ್ತಮ ನಟ ಪ್ರಶಸ್ತಿ

2019ರ ಚಲನಚಿತ್ರ ಪ್ರಶಸ್ತಿ ಪ್ರಕಟ: ಕಿಚ್ಚ ಸುದೀಪ್‌‌ಗೆ ಅತ್ಯುತ್ತಮ ನಟ ಪ್ರಶಸ್ತಿ

ಖ್ಯಾತ ನಟ ಕಿಚ್ಚ ಸುದೀಪ್‌ ಮತ್ತು ಅನುಪಮಾ ಗೌಡ ಅವರು ಅತ್ಯುತ್ತಮ ನಟ ಹಾಗೂ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. State Fim Awards

[ccc_my_favorite_select_button post_id="101446"]
error: Content is protected !!