ಬೆಂಗಳೂರು ಗ್ರಾಮಾಂತರ ಜಿಲ್ಲೆ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ದೊಡ್ಡಬಳ್ಳಾಪುರದ ತಾಲ್ಲೂಕು ಮಟ್ಟದಲ್ಲಿ ನೇರಗುತ್ತಿಗೆ ಆಧಾರದ ಮೇಲೆ ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವೀಧರರಾಗಿರಬೇಕು. ವಯೋಮಿತಿ 21 ರಿಂದ 45 ಒಳಗೊಂಡಿರಬೇಕು. ಕಂಪ್ಯೂಟರ್ ನಿರ್ವಹಣೆ ಅಥವಾ ತಂತ್ರಜ್ಞಾನದಲ್ಲಿ ಮತ್ತು ಸಾಪ್ಟ್ ವೇರ್ ಅಪ್ಲಿಕೇಷನಲ್ಲಿ ಕನಿಷ್ಠ 2 ವರ್ಷ ಅನುಭವ ಹೊದಿರಬೇಕು.
ಆಂಗ್ಲ ಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರಬೇಕು.
ಕಂಪ್ಯೂಟರ್ ಜ್ಞಾನದ ಜೊತೆಗೆ ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಯಾಗಿರಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ 01 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ : 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29787445 ಇಲ್ಲಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.