ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (Sarigama viji) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ನಿಧನ ಹೊಂದಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಸಿನಿಮಾ ನಟ-ನಟಿಯರು ವಿಜಿ ಅವರನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಅವರು ಗುಣವಾಗುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು.
ಆದರೆ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದರು. ನಾಳೆ ಬೆಳಿಗ್ಗೆ 10 ರಿಂದ 12 ಗಂಟೆಯ ಒಳಗೆ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.