ಮುಂಬಯಿ: ಬಾಲಿವುಡ್ ಖ್ಯಾತ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಮೇಲೆ ಮಾರಣಾಂತಿಕೆ ಹಲ್ಲೆಯಾಗಿದ್ದು, ನಟ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೈಫ್ ಅಲಿಖಾನ್‌ರವರ ಮುಂಬೈನ ಬಾಂದ್ರಾದ ನಿವಾಸದಲ್ಲೇ ದುಷ್ಕರ್ಮಿಯೊಬ್ಬ ಅವರ ಮೇಲೆ ಚಾಕುವಿನಿಂದ 6 ಬಾರಿ ಹಲ್ಲೆ ಮಾಡಿದ್ದಾನೆ.
ಸೈಫ್ ಮೇಲೆ ಹಲವು ಬಾರಿ ಚಾಕುವಿನಿಂದ ಇರಿದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ದು, ಲೀಲಾವತಿ ಆಸ್ಪತ್ರೆಗೆ ದಾಖಲಾಗಿದೆ.. ಸೈಫ್ ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆಂದು ವರದಿಯಾಗಿದೆ.
ಗುರುವಾರ ಬೆಳಗಿನ ಜಾವ 2.30 ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿ ಏಕಾಏಕಿ ಸೈಫ್ ಮಲಗಿದ್ದ ಕೊಠಡಿಗೆ ನುಗ್ಗಿ ಹಲ್ಲೆ ಮಾಡಿದ್ದಾನೆ. ಚಾಕು ಇರಿದ ಕಿಡಿಗೇಡಿ ಕಳ್ಳತನಕ್ಕೆ ಯತ್ನಿಸಿದ್ದ ಎಂದು ಸಹ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕರೀನಾ ಮತ್ತು ಅವರ ಮಕ್ಕಳು ಸುರಕ್ಷಿತವಾಗಿದ್ದಾರೆ.
ಕಳ್ಳತನ ಮಾಡಲು ಬಂದಿದ್ದವನೇ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ. ಆದರೂ ಹಳೇ ದ್ವೇಷವೂ ಚಾಕು ಇರಿತಕ್ಕೆ ಪ್ರಮುಖ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದು ಸಿಸಿ ಕ್ಯಾಮೆರಾ ಆಧರಿಸಿ ತನಿಖೆ ಕೈಗೊಂಡಿದ್ದಾರೆ.