Site icon ಹರಿತಲೇಖನಿ

Doddaballapura Accident.. ಯುವ ಛಾಯಾಗ್ರಾಹಕ ಸಾವು, ಖಾಸಗಿ ಆಸ್ಪತ್ರೆ ವಿರುದ್ಧ ಆಕ್ರೋಶ

Doddaballapura: Accident.. Young photographer dies, outrage against private hospital

Doddaballapura: Accident.. Young photographer dies, outrage against private hospital

ದೊಡ್ಡಬಳ್ಳಾಪುರ (Doddaballapura): ನಿನ್ನೆ ರಾತ್ರಿ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ (Accident) ಯುವ ಛಾಯಾಗ್ರಾಹಕ ಚಂದನ್ ಸಾವನಪ್ಪಿದ್ದಾರೆ. ಅವರಿಗೆ 24 ವರ್ಷ ವಯಸ್ಸಾಗಿತ್ತು

ನಗರದ ಭುವನೇಶ್ವರಿ ನಗರದ ನಿವಾಸಿ ಚಂದನ್ ಮಧು ಸ್ಟುಡಿಯೋದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ ರಾತ್ರಿ ದೊಡ್ಡಬೆಳವಂಗಲದಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ರಾಷ್ಟ್ರೀಯ ಹೆದ್ದಾರಿ ನಾಗಸಂದ್ರ – ಆಲಹಳ್ಳಿ ನಡುವೆ ನಿಯಂತ್ರಣದ ತಪ್ಪಿದ ಕಾರು ಅಪಘಾತಕ್ಕೀಡಾಗಿತ್ತು.

ಈ ವೇಳೆ ಗಾಯಗೊಂಡ ಚಂದನ್ ಅವರನ್ನು ಬಾಶೆಟ್ಟಿಹಳ್ಳಿ ಸಮೀಪದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಆದರೆ ಚಂದನ್ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗಿನ ಜಾವ ನಿಧನರಾಗಿದ್ದಾರೆ.

ಆಸ್ಪತ್ರೆ ವಿರುದ್ಧ ಆರೋಪ

ಚಂದನ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಆಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಚಿಕಿತ್ಸೆ ನೀಡದೆ ಬೇಜವಬ್ದಾರಿ ವರ್ತಿಸಿದ್ದಾರೆಂದು ಆರೋಪಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಪದಾಧಿಕಾರಿಗಳು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಬಂದು ಮಾತಕತೆ ನಡೆಸಿದರು.

ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನ ನಡೆದಿದೆ.

Exit mobile version