ದೊಡ್ಡಬಳ್ಳಾಪುರ: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ (JDS) ಕಾರ್ಯಕರ್ತರು ನಾಮಪತ್ರ ಸಲ್ಲಿಸಿ, ಸಕ್ರಿಯವಾಗಿ ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ ಕರೆ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಹಾಲು ಉತ್ಪಾದಕರ ಸಹಕಾರ ಸಂಘ (MPCS), ವ್ಯವಸಾಯ ಸೇವಾ ಸಹಕಾರ ಸಂಘ, ಪಿಎಲ್ಡಿ ಬ್ಯಾಂಕ್, ಜಿಲ್ಲಾಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಕಾಂಕ್ಷೆ ಉಳ್ಳ ಜೆಡಿಎಸ್ ಕಾರ್ಯಕರ್ತರು ಸಿದ್ದವಾಗಬೇಕಿದೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಉಳ್ಳವರು ಸ್ಥಳೀಯ ಜೆಡಿಎಸ್ ಮುಖಂಡರೊಂದಿಗೆ ಚರ್ಚಿಸಿ, ನಾಮ ಪತ್ರ ಸಲ್ಲಿಸಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
ಆ ಮೂಲಕ ಜೆಡಿಎಸ್ ಪಕ್ಷ ಸಂಘಟನೆ ಕಾರ್ಯವನ್ನು ಬಿ.ಮುನೇಗೌಡ ಅವರು ತಳಮಟ್ಟದಿಂದ ಆರಂಭಿಸಿದ್ದಾರೆ.