![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಬೆಳಗಾವಿ: ಇತ್ತೀಚೆಗೆ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi hebbalkar) ಅವರನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿದರು.
![hulukudi maharathotsava](https://www.harithalekhani.com/wp-content/uploads/2025/02/IMG-20250205-WA0002.jpg)
ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಗಳು ಕುಶಲೋಪರಿ ವಿಚಾರಿಸಿ, ರಸ್ತೆ ಅಪಘಾತದ ಮಾಹಿತಿ ಪಡೆದು ಆರೋಗ್ಯ ವಿಚಾರಿಸಿ, ಆಶೀರ್ವದಿಸಿದರು.
ಇದೇ ವೇಳೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣ್ ದೀಪ್ ಸುರ್ಜೇವಾಲಾ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೂ ಸಹ ಜೊತೆಗಿದ್ದರು.
![Hulukudi mahajathre](https://www.harithalekhani.com/wp-content/uploads/2025/02/IMG-20250205-WA0001.jpg)
ಮೂರು ದಿನಗಳ ಹಿಂದೆ ಬೆಂಗಳೂರಿನಿಂದ ಬೆಳಗಾವಿಗೆ ತೆರಳುವ ವೇಳೆ ನಾಯಿಗಳು ಅಡ್ಡಬಂದ ಕಾರಣ ಲಕ್ಷ್ಮಿ ಹೆಬ್ಬಾಳಕರ್ ಅವರ ಕಾರು ಅಪಘಾತಕ್ಕೊಳಗಿತ್ತು.
ಈ ದುರ್ಘಟನೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ಪ್ರಾಣಾಪಾಯದಿಂದ ಕೂದಲೆಳೆಯಲ್ಲಿ ಪಾರಾಗಿದ್ದರು.
ಆದರೆ ಲಕ್ಷ್ಮಿ ಹೆಬ್ಬಾಳರ್ ಅವರ ಬೆನ್ನುಮೂಳೆಗೆ ಪೆಟ್ಟಾಗಿತ್ತು. ಸದ್ಯಕ್ಕೆ ಒಂದು ತಿಂಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ.