Site icon Harithalekhani

Kumbhamela| ಫೆಬ್ರವರಿ 10 ರಿಂದ 12 ರವರೆಗೆ ಕರ್ನಾಟಕದಲ್ಲಿ ಕುಂಭಮೇಳ..!

KumbhaMela in Karnataka from February 10 to 12..!

KumbhaMela in Karnataka from February 10 to 12..!

ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ ನರಸೀಪುರದ ತ್ರಿವೇಣಿ ಸಂಗಮದ ಬಳಿ ಕುಂಭಮೇಳ (Kumbhamela) 2025 ನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದರು

ಇಂದು ಕುಂಭ ಮೇಳ -2025 ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಫೆಬ್ರವರಿ 10 ರಿಂದ 12 ಈವರೆಗೆ ಟಿ ನರಸೀಪುರದಲ್ಲಿ ಕುಂಭಮೇಳ ನಡೆಯುತ್ತದೆ. ಪ್ರಥಮ ಬಾರಿಗೆ 1989 ರಲ್ಲಿ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ.

ಕುಂಭಮೇಳದಲ್ಲಿ ಸ್ವಚ್ಚತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆ.ಎಸ್.ಆರ್.ಟಿ. ಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ ಗಳ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಅವರು ಮಾತನಾಡಿ 3 ದಿನವೂ ವಿವಿಧ ಕಾರ್ಯಕ್ರಮಗಳು ಜರುಗುತ್ತವೆ. ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಕಾವೇರಿ ಆರತಿಯನ್ನು ಫೆಬ್ರವರಿ 11 ರಂದು ಮಾಡಲಾಗುತ್ತದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶೀಯ ಸಂಸ್ಕೃತಿಯನ್ನು ಬಿಂಬಿಸುವಂತೆ ಮಾಡಬೇಕು. ಸ್ನಾನ ಘಟ್ಟಗಳಲ್ಲಿ ಸ್ವಚ್ಚತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. ಉಚಿತ ಅನ್ನದಾನ ಮಾಡುವ ಕಡೆ ಸ್ವಚ್ಚತೆ ಕಾಪಾಡಬೇಕು ಎಂದು ಸೂಚನೆ ನೀಡಿದರು.

ಫೈರ್ ಸೆಪ್ಟಿ ಕೈಗೊಳ್ಳಬೇಕು. ಕುಟೀರಗಳ ಬಳಿ ಭದ್ರತೆ ವ್ಯವಸ್ಥೆ ಕೈಗೊಳ್ಳಬೇಕು. ರಸ್ತೆಗಳು ಉತ್ತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು

ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು 1989 ರಿಂದ ಕುಂಭಮೇಳ ಆಚರಣೆ ಪ್ರಾರಂಭವಾಯಿತು. ಪ್ರತಿ 3 ವರ್ಷಕ್ಕೆ ಒಮ್ಮೆ ನಡೆಯುತ್ತದೆ. 2019 ರಲ್ಲಿ ನಡೆಯಿತು. ಕೋವಿಡ್ ಇದ್ದುದರಿಂದ 2021 ರಲ್ಲಿ ಕುಂಭಮೇಳ ನಡೆಯಲಿಲ್ಲ.

ನದಿಯಲ್ಲಿ ಸ್ಥಾನ ಮಾಡಲು 5 ಕಡೆ ಜಾಗ ಗುರುತಿಸಲಾಗಿದೆ. 1 ಯಾಗ ಶಾಲೆ ನಿರ್ಮಾಣ ಮಾಡಲಾಗುವುದು. 6 ಕುಟೀರಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version