ನೆಲಮಂಗಲ: ತಾಲೂಕಿನ ಗುಂಡೇನಹಳ್ಳಿ ಬಳಿ ಇಂದು ಬೆಳ್ಳಂ ಬೆಳಗ್ಗೆ ಲಾರಿ, ಕಾರು, ಬಸ್ ನಡುವೆ ಸರಣಿ ಅಪಘಾತ (Accident) ಸಂಭವಿಸಿದ್ದು, ಪವಾಡ ಸದೃಶ್ಯದಂತೆ ಭೀಕರ ಅಪಘಾತ ನಡುವೆಯೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 48 ರ ಗುಂಡೇನಹಳ್ಳಿ ಬಳಿ ಚಲಿಸುತ್ತಿದ್ದ ಟ್ರಕ್ ಗೆ ಚಾಲಕನ ನಿಯಂತ್ರಣ ತಪ್ಪಿ ಶಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು, ಇದೆ ವೇಳೆ ವೇಗವಾಗಿ ಬಂದ ಟೂರಿಸ್ಟ್ ಬಸ್ ಕೂಡ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಕಾರು ಲಾರಿಯ ನಡುವೆ ಸಿಲುಕಿ ಕೊಂಡಿದೆ. ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜು-ಗುಜ್ಜಾಗಿದೆ.
ಸದ್ಯ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ರಸ್ತೆ ಕಾಮಗಾರಿ ಸ್ಥಗಿತ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.
ಅಲ್ಲದೇ ಅಪಘಾತದಿಂದ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.