ಅಮರಾವತಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆಗೆ ಪುನಚೇತನಕ್ಕೆ ಪ್ಯಾಕೇಜ್ ಘೋಷಿಸಿರಯವ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ (HD Kumaraswamy) ಆಂಧ್ರಪ್ರದೇಶದಲ್ಲಿ ಜನ ಹಾಲಿನ ಅಭಿಷೇಕ ಮಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕಳೆದ ಎರಡು ದಿನದ ಹಿಂದೆಯಷ್ಟೇ ವೈಜಾಗ್ ಉಕ್ಕಿನ ಕಾರ್ಖಾನೆಯ ಪುನಶ್ವೇತನಕ್ಕೆ ಕೇಂದ್ರದಿಂದ ಸುಮಾರು 11,440 ಕೋಟಿ ರೂ. ಘೋಷಿಸಲಾಗಿದೆ.
ಕೆಲ ತಿಂಗಳಲ್ಲಿ ಇಡೀ ಕಾರ್ಖಾನೆ ಪೂರ್ಣ ಪ್ರಮಾಣದಲ್ಲಿ ಉಕ್ಕು ಉತ್ಪಾದನೆಗೆ ಅಗತ್ಯವಾದ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂದು ಸಚಿವ ಹೆಚ್‌ಡಿ ಕುಮಾರಸ್ವಾಮಿ ತಿಳಿಸಿದ್ದರು.
ಅದರಂತೆ ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಕಾರ್ಖಾನೆಗೆ ಮರು ಜನ್ಮ ನೀಡಿದ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಆಂದ್ರಪ್ರದೇಶದ ಜನ ಅವರ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಧನ್ಯವಾದ ತಿಳಿಸಿದರು.