Kho Kho Champions Felicitated by Union Minister H.D. Kumaraswamy

ಖೋಖೋ ವಿಶ್ವಕಪ್; ಎಂ.ಕೆ.ಗೌತಮ್, ಚೈತ್ರಾ ಅವರನ್ನು ಗೌರವಿಸಿದ HDK

ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ಸನ್ಮಾನಿಸಿ ಗೌರವಿಸಿದರು.

ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಟಗಾರರಾದ ಎಂ.ಕೆ.ಗೌತಮ್ ಹಾಗೂ ಚೈತ್ರಾ, ಮತ್ತವರ ಕೋಚ್’ಗಳಾದ ಸುಮಿತ್ ಭಾಟಿಯಾ ಹಾಗೂ ತಂಡದ ಮ್ಯಾನೇಜರ್ ರಾಜಕುಮಾರಿ ಅವರನ್ನು ಬರಮಾಡಿಕೊಂಡ ಸಚಿವರು, ಎಲ್ಲರನ್ನೂ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಗೌತಮ್, ಚಿತ್ರಾ ಇಬ್ಬರಿಗೂ ಶುಭ ಕೋರಿದ ಸಚಿವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋಖೋ ವಿಶ್ವಕಪ್‌ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು.

ಕರ್ನಾಟಕದ ಗರಿಮೆಯನ್ನು ನೀವು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದು ಶುಭ ಹಾರೈಸಿದರು ಸಚಿವರು.

ದೇಶೀಯ ಕ್ರೀಡೆ ಖೋಖೋದಲ್ಲಿ ಭಾರತ ವಿಶ್ವ ಚಾಂಪಿಯನ್ ಆಗಿರುವುದಕ್ಕೆ ನಿಮ್ಮ ಜೊತೆ ತಂಡಸ್ಫೂರ್ತಿಯಿಂದ ಆಟವಾಡಿದ ಇತರೆ ಎಲ್ಲಾ ಆಟಗಾರರಿಗೂ, ನಿಮ್ಮ ತರಬೇತುದಾರರಿಗೆ ಕೂಡ ನನ್ನ ಅಭಿನಂದನೆಗಳು ಎಂದು ಸಚಿವರು ಹೇಳಿದರು.

ಕನ್ನಡ ನೆಲದ ಗ್ರಾಮೀಣ ಮಕ್ಕಳಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಮಾತ್ರವಲ್ಲದೆ, ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಪೇರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ.

ಇಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸುತ್ತೇನೆ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳಿಗೆ ಇವರ ಸಾಧನೆ ಸದಾ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡುತ್ತಾ ಹೇಳಿದರು.

ಎಂ.ಕೆ.ಗೌತಮ್ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲೀಗೆರೆ ಗ್ರಾಮದವರು ಹಾಗೂ ಚೈತ್ರಾ ಅವರು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದವರು.

ಗ್ರಾಮೀಣ ಮಕ್ಕಳು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯ ಆಗುವಷ್ಟು ಪ್ರೋತ್ಸಾಹ ನೀಡುತ್ತೇವೆ. ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಬೆಂಬಲ, ಪ್ರೋತ್ಸಾಹ ನೀಡುತ್ತಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೌತಮ್, ಚೈತ್ರಾ ಇಬ್ಬರೂ; ಕರ್ನಾಟಕದವರೇ ಆಗಿರುವ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯ ಘಟನೆ ಆಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ನವದೆಹಲಿಗೆ..! DK Shivakumar Video

ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ನವದೆಹಲಿಗೆ..! DK Shivakumar Video

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ದಿಢೀರ್ ನವದೆಹಲಿಗೆ ಪ್ರಯಾಣ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರಿಗೆ ಮಂಗಳವಾರ ನೀಡಿದ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="104250"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಗಲಾಟೆ ಬಿಡಿಸಲು ಹೋದವನ ಕೊಲೆ..!

ಗಲಾಟೆ ಬಿಡಿಸಲು ಹೋದವನ ಕೊಲೆ..!

ಶ್ರೀನಿವಾಸಪುರ: ಹಣದ ವಿಚಾರಕ್ಕೆ ಇಬ್ಬರ ನಡುವೆ ನಡೆದ ಜಗಳವನ್ನು ಬಿಡಿಸಲು ಹೋದ ಮೂರನೇ ವ್ಯಕ್ತಿ ಕೊಲೆಯಾಗಿರುವ (Murder) ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಪಲ್ಲಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಗುಂತವಾರಪಲ್ಲಿ ಗ್ರಾಮದ 45 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಕೂಲಗುರ್ಕಿ

[ccc_my_favorite_select_button post_id="104257"]
ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರದಲ್ಲಿ ಮತ್ತೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಅಪಘಾತ (Accident) ಪ್ರಕರಣಗಳಿಗೆ ಕಡಿವಾಣವೇ ಇಲ್ಲವೇ ಎಂಬ ಪ್ರಶ್ನೆ, ಆತಂಕ ಸಾರ್ವಜನಿಕರನ್ನು ಕಾಡುತ್ತಿದೆ. ರಾಜಕೀಯ ಪಕ್ಷಗಳ ಕೃಪಾಕಟಾಕ್ಷದಿಂದ ದೊಡ್ಡಬಳ್ಳಾಪುರಕ್ಕೆ ಯಾವ ದಿಕ್ಕಿನಿಂದ ಬಂದರು ದುಡ್ಡು ಕಟ್ಟಿಯೇ ಬರಬೇಕು (ಟೋಲ್ ನಿರ್ಮಾಣ) ಅಂದರೆ

[ccc_my_favorite_select_button post_id="104209"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!