ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಿಷನ್ ಶಕ್ತಿ ಯೋಜನೆಯ ಸಾಮರ್ಥ್ಯದಡಿ “ಜಿಲ್ಲಾ ಮಹಿಳಾ ಸಬಲೀಕರಣ ಘಟಕ” ದಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಾಮಾಜಿಕ ಕಾರ್ಯದಲ್ಲಿ (ಸಾಮಾಜಿಕ ಅಭಿವೃದ್ಧಿ/ ನ್ಯೂಟ್ರಿಶಿಯನ್/ಆರೋಗ್ಯ ನಿರ್ವಹಣೆ) ಸ್ನಾತಕೋತ್ತರ ಪದವೀಧರರಾಗಿರಬೇಕು.
ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಯಲ್ಲಿ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 06 ರ ಸಂಜೆ 05 ಗಂಟೆಯೊಳಗೆ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕಛೇರಿ ದೂ: 080-29787445 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.