Conflict in BJP.. Congress to power again in 2028; CMSiddaramaiah

ಬಿಜೆಪಿಯಲ್ಲಿ ಕಚ್ಚಾಟ.. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ; ಸಿಎಂ ಸಿದ್ದರಾಮಯ್ಯ| Video

ಚಿತ್ರದುರ್ಗ: ಬಿಜೆಪಿಯಲ್ಲಿ ಎರಡು ಮೂರು, ನಾಲ್ಕು ಗುಂಪುಗಳಿವೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯಲ್ಲಿ ಕಚ್ಚಾಟ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದ್ದು, ನಾವು ಐದು ವರ್ಷ ಅಧಿಕಾರ ನಡೆಸಿ 2028 ನಡೆವ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದರು.

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿಗಳನ್ನು ಪಾವತಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ

ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ.

ಸರ್ಕಾರ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡಿದ್ದು , ಪ್ರಧಾನಿಗಳು, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ ಎಂದರು.

ನನ್ನನ್ನೂ ಒಳಗೊಂಡಂತೆ ಉಪಮುಖ್ಯಮಂತ್ರಿಗಳು ಭೇಟಿಯಾಗಿ ಬಂದಿದ್ದೇವೆ. ನಬಾರ್ಡ್ ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು. ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಜೆಟ್ ನಲ್ಲಿಯಾದರೂ ಹಣ ಮೀಸಲಿಟ್ಟು ಬಿಡುಗಡೆ ಮಾಡಲಿ ಎಂದು ಪತ್ರವನ್ನು ಕೇಂದ್ರಕ್ಕೆ ಬರೆದು ಒತ್ತಡ ಹಾಕಲಾಗುತ್ತಿದೆ.

ರೈತರ ಜಮೀನು ಮುಳುಗಡೆಯಾಗದಂತೆ ತಡೆಯಲು ಪ್ರಯತ್ನ

ಹೊಸದುರ್ಗ ತಾಲ್ಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಾಣಿ ವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ ಜನವರಿ 14, 2025 ರಲ್ಲಿ ಕೋಡಿ ಬಿದ್ದಿದೆ.

ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿ ವಿಲಾಸ ಸಾಗರ ಎಂದು ಕರೆಯಲಾಗಿದೆ. 1898 ನೇ ಇಸವಿಯಲ್ಲಿ ಪ್ರಾರಂಭವಾಗಿ 1907 ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30.ಟಿ.ಎಂ.ಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ ಎಂದು ಸಿಎಂ ವಿವರಿಸಿದರು.

ಈ ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು. ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45 ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು ಎಂದು ತಿಳಿಸಿದರು.

ಸಮೃದ್ಧ ಮಳೆಗಾಗಿ ಪ್ರಾರ್ಥನೆ

ಇಂದು ಗಂಗಾಪೂಜೆಯನ್ನು ಮಾಡಿ ಬಾಗಿನ ಅರ್ಪಿಸಿದ್ದೇವೆ. ಪ್ರತಿ ವರ್ಷವೂ ರೈತರ ಜಮೀನುಗಳಿಗೆ ನೀರು ಸಿಗುವಂತಾಗಲಿ ಒಳ್ಳೆ ಮಳೆ, ಬೆಳೆಯಾಗಿ ಪ್ರತಿ ವರ್ಷವೂ ಕೋಡಿ ಬೀಳುವಂತೆ ಕೆರೆಗೆ ನೀರು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವಾದರೆ ಪ್ರತಿ ವರ್ಷವೂ ಅಣೆಕಟ್ಟಿಗೆ ನೀರು ಹರಿಯಲಿದೆ ಎಂದರು.

ರಾಜಕೀಯ

ನಾನು BJP ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಬಸವರಾಜ ಬೊಮ್ಮಾಯಿ

ನಾನು BJP ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಬಸವರಾಜ ಬೊಮ್ಮಾಯಿ

ನಮ್ಮ ಆತ್ಮೀಯ ಸ್ನೇಹಿತರಲ್ಲಿ ಒಮ್ಮೊಮ್ಮೆ ಗ್ಯಾಪ್ ಬರುತ್ತದೆ. ಸ್ನೇಹ ಅಂತಿಮವಾಗಿ ಗೆಲ್ಲುತ್ತದೆ. ಇದೆಲ್ಲಾ ಸರಿಯಾಗುತ್ತದೆ. ಜನಾರ್ದನ ರೆಡ್ಡಿ ಹತ್ತಿರ ಮಾತನಾಡುವೆ. BJP

[ccc_my_favorite_select_button post_id="101541"]
ಬಿಜೆಪಿಯಲ್ಲಿ ಕಚ್ಚಾಟ.. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ; ಸಿಎಂ ಸಿದ್ದರಾಮಯ್ಯ| Video

ಬಿಜೆಪಿಯಲ್ಲಿ ಕಚ್ಚಾಟ.. 2028ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ; ಸಿಎಂ ಸಿದ್ದರಾಮಯ್ಯ| Video

ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. Cmsiddaramaiah

[ccc_my_favorite_select_button post_id="101536"]
ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ನಮ್ಮ ಆದ್ಯತೆ ಯಾವುದು..?; ಕರವೇ ರಾಜಘಟ್ಟರವಿ ಬೇಸರ

ಅರ್ಥ ಆಗುವವರಿಗೆ ಇದಕ್ಕಿಂತ ಹೆಚ್ಚಾಗಿ ಹೇಳಬೇಕಿಲ್ಲ. ಅರ್ಥ ಆಗದವರಿಗೆ ಹೇಳಿ ಪ್ರಯೋಜನವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ‌. monalisa

[ccc_my_favorite_select_button post_id="101378"]

Indian Army Day 2025: ಇತಿಹಾಸ, ಥೀಮ್,

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

Kho kho world cup ಫೈನಲ್‌ನಲ್ಲಿ ಗೆದ್ದು ಬೀಗಿದ ಭಾರತ

ಮೊದಲ ದಿನದಿಂದಲೂ ಭಾರತ ಮಹಿಳಾ ತಂಡ ಚಾಂಪಿಯನ್ ಆಗಲಿದೆ ಎಂಬ ದೊಡ್ಡ ನಿರೀಕ್ಷೆಯಿತ್ತು. Kho kho world cup

[ccc_my_favorite_select_button post_id="101277"]
ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ಹಲ್ಲೆ..!: Video ವೈರಲ್

ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮೇಲೆ ಹಲ್ಲೆ..!: Video ವೈರಲ್

ಜಗದೀಶ್ ಹಾಗೂ ಅಪರಿಚಿತ ಯುವಕರ ಗುಂಪಿನ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟವಾಗಿದೆ. ಕೆಲವರು ಈ ಸಂದರ್ಭದಲ್ಲಿ ಕೆಲವರು ಜಗದೀಶ್ ಅವರನ್ನು ಹೊಡೆಯದಂತೆ ತಡೆಯುವುದಕ್ಕೂ ಪ್ರಯತ್ನಪಟ್ಟಿದ್ದಾರೆ. Jagdish

[ccc_my_favorite_select_button post_id="101544"]
ಕರ್ನಾಟಕ ಎಕ್ಸ್‌ಪ್ರೆಸ್ ಮಹಾ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ..!| Video

ಕರ್ನಾಟಕ ಎಕ್ಸ್‌ಪ್ರೆಸ್ ಮಹಾ ದುರಂತ: ಮೃತರ ಸಂಖ್ಯೆ 13ಕ್ಕೆ ಏರಿಕೆ..!| Video

ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಕಾರಣ, ಆ ರೈಲಿನಿಂದ ಜಿಗಿದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಪಕ್ಕದ ಹಳಿ ಮೇಲೆ ಬಂದ ಕರ್ನಾಟಕ ಎಕ್ಸ್ ಪ್ರೆಸ್ ರೈಲು ಹರಿದಿತ್ತು‌ train accident

[ccc_my_favorite_select_button post_id="101499"]

ಭೀಕರ ಅಪಘಾತ.. 10 ಮಂದಿ ದುರ್ಮರಣ.. 13

[ccc_my_favorite_select_button post_id="101428"]

Accident: ಮಂತ್ರಾಲಯ ಮಠದ 3 ವಿದ್ಯಾರ್ಥಿಗಳು ಸಾವು..!

[ccc_my_favorite_select_button post_id="101415"]

FROM DODDABALLAPURA RAILWAY POLICE: ರೈಲಿಗೆ ಸಿಲುಕಿ

[ccc_my_favorite_select_button post_id="101334"]

Accident| KSRTC ಬಸ್ ಪಲ್ಟಿ..!| Video

[ccc_my_favorite_select_button post_id="101321"]

ಭೀಕರ ಅಪಘಾತ.. ಚಾಲಕ ಗ್ರೇಟ್ ಎಸ್ಕೇಪ್..!

[ccc_my_favorite_select_button post_id="101304"]

Accident: ತೊಂಡೇಭಾವಿ ಬಳಿ‌ ಮತ್ತೆ ಭೀಕರ ಅಪಘಾತ..

[ccc_my_favorite_select_button post_id="101281"]

ಆರೋಗ್ಯ

ಸಿನಿಮಾ

ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್..!

ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿರಾಕರಿಸಿದ ಸುದೀಪ್..!

ಈ ಕುರಿತು ಟ್ವಿಟ್ ಮಾಡಿರುವ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅರ್ಹ ಬೇರೊಬ್ಬ ನಟನಿಗೆ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರವನ್ನು ಮನವಿ ಮಾಡಿದ್ದಾರೆ. Sudeep

[ccc_my_favorite_select_button post_id="101533"]
error: Content is protected !!