Delhi Republic Day 2025: Confident of awarding the state's still film

ದೆಹಲಿ ಗಣರಾಜ್ಯೋತ್ಸವ 2025: ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ

ಬೆಂಗಳೂರು: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ (Republic Day) ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ.

ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು ಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯದಿಂದ ಭಾಗವಹಿಸಲಿರುವ ಸ್ತಬ್ಧಚಿತ್ರವು ಗದಗಿನ ಲಕ್ಕುಂಡಿಯಲ್ಲಿರುವ ಮಂದಿರಕ್ಕೆ ಹೋಲುವಂತಿರುವ ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ 50ಕ್ಕೂ ಹೆಚ್ಚು ಜನ ಕಲಾವಿದರು,ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣಗೊಳಿಸಿದ್ದಾರೆ.

ಜ.23 ರ ಗುರುವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಸ್ತಬ್ಧಚಿತ್ರದ ಪೂರ್ವಾಭ್ಯಾಸದಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರಕ್ಕೆ ಎರಡೂ ಬದಿಯಲ್ಲಿ ನೆರೆದ ಜನಸ್ತೋಮವು ತಮ್ಮ ಹತ್ತಿರ ಸ್ತಬ್ಧಚಿತ್ರ ಬಂದಾಗ ಅದರ ವಿನ್ಯಾಸ, ಶಿಲ್ಪಕಲೆ, ಸಂಸ್ಕೃತಿ, ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಿದ ಕಲಾವಿದರ ದೃಶ್ಯವನ್ನು ಕಂಡ ಜನರು ಕರತಾಡನ ಮೂಲಕ ಅಭೂತಪೂರ್ವವಾಗಿ ಸ್ವಾಗತಿಸಿ ಪ್ರಶಂಸೆ ವ್ಯಕ್ತಪಡಿಸಿದರು.

ಕರ್ತವ್ಯಪಥದಲ್ಲಿ ಸೇರಿದ ಜನರಿಂದ ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆಗೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ದೊರೆಯಲಿದೆ ಎಂಬ ವಿಶ್ವಾಸವನ್ನು ಆಯುಕ್ತರಾದ ಹೇಂಮಂತ್ ನಿಂಬಾಳ್ಕರ್ ಅವರು ವ್ಯಕ್ತಪಡಿಸಿದರು.

ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್

ಕರ್ತವ್ಯ ಪಥದಲ್ಲಿ ಸಾಗಿದ ಸ್ತಬ್ದಚಿತ್ರಕ್ಕೆ ಕನ್ನಡ ಸಾಹಿತ್ಯ ಇರುವ ಶಿಲ್ಪಕಲೆಯ ತೊಟ್ಟಿಲು ನಮ್ಮ ಗದುಗಿನ ಲಕ್ಕುಂಡಿ ಎಂಬ ಹಾಡಿಗೆ ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್ ಅವರ ಸಂಗೀತ ಸಂಯೋಜನೆಯ ನೀನಾದಕ್ಕೆ ಗದಗ, ಬೆಂಗಳೂರು, ಮೈಸೂರು ಹಾಗೂ ಧಾರವಾಡದಿಂದ ಆಗಮಿಸಿದ ಸ್ತಬ್ಧಚಿತ್ರದ ಕಲಾವಿದರು ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿ ಹೆಚ್ಚಿನ ಮೆರಗು ತಂದಿದ್ದಲ್ಲದಲೇ ಅಲ್ಲಿ ಸೇರಿದವರನ್ನು ರೋಮಾಂಚನಗೊಳಿಸಿತು.

ಸ್ತಬ್ದಚಿತ್ರದ ಮೇಲ್ಭಾಗದಲ್ಲಿ 10 ಜನ ಕಲಾವಿದರು ಸೇರಿದಂತೆ 18 ಜನ ಕಲಾವಿದರಿದ್ದು, ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ನಾಲ್ಕು ಪುರುಷ-ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು, ಸ್ತಬ್ಧಚಿತ್ರಕ್ಕೆ ಇನ್ನಷ್ಟು ಮೆರಗು ತಂದಿತು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ಶಿಲ್ಪಕಲೆಯ ತೊಟ್ಟಿಲು ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ.

ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, ಕ್ರಿ. ಶ. 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ, ಪುಷ್ಕರಣಿ), ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ.

ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!