ಬೆಂಗಳೂರು ಗ್ರಾಮಾಂತರ ಜಿಲ್ಲೆ; ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಚೇರಿಗೆ ಸಂಸದ ಡಾ.ಕೆ ಸುಧಾಕರ್ (Drk Sudhakar) ಪೂಜೆ ಸಲ್ಲಿಸುವ ಮೂಲಕ ಕಾರ್ಯಾಲಯಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರ ಕೆಲಸಗಳು ಸುಗಮವಾಗಿ ಸಾಗಲು ಕಛೇರಿ ತೆರೆಯಲಾಗಿದೆ. ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಕಲಾಪಕ್ಕೆ ಭಾಗವಹಿಸುವ ದಿನಗಳನ್ನು ಹೊರತುಪಡಿಸಿ, ಪ್ರತಿ ಸೋಮವಾರ ಅರ್ಧ ದಿನ ಈ ಕಚೇರಿಯಲ್ಲಿ ಲಭ್ಯವಿರುತ್ತೇನೆ.
ಉಳಿದಂತೆ ನನ್ನ ಆಪ್ತ ಸಹಾಯಕರು ಪ್ರತಿದಿನ ಕಛೇರಿಯಲ್ಲಿ ಲಭ್ಯವಿದ್ದು ಸಾರ್ವಜನಿಕರ ಅಹವಾಲುಗಳನ್ನು ಆಲಿಸಲಿದ್ದಾರೆ ಎಂದರು.