Site icon ಹರಿತಲೇಖನಿ

Doddaballapura; ಧ್ವಜಾರೋಹಣ ನೆರವೇರಿಸಿದ ಕೆ.ವಿ.ವೆಂಕಟೇಶರೆಡ್ಡಿ

doddaballapura; KV Venkateshareddy hoisted the flag

doddaballapura; KV Venkateshareddy hoisted the flag

ದೊಡ್ಡಬಳ್ಳಾಪುರ (Doddaballapura); ಭಾರತದಲ್ಲಿ ಸಂವಿಧಾನವೇ ಸರ್ವೋಚ್ಚವಾದುದು. ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಯಿತು ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಮ್ಮ ದೇಶದ  ಪ್ರತಿಯೊಬ್ಬರೂ  ಸಂವಿಧಾನವನ್ನು ಗೌರವಿಸಬೇಕು.  ಸಂವಿಧಾನದ ಆಶಯಗಳನ್ನು   ಸಾಕಾರಗೊಳಿಸುವುದು  ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ಜಾರಿಗೆ ಬಂದ ದಿನವಾದ  ಗಣರಾಜ್ಯೋತ್ಸವ    ದಿನಾಚರಣೆ  ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಮಹತ್ವದ ದಿನವಾಗಿದೆ ಎಂದರು.

ನಮ್ಮ ಸಂವಿಧಾನವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಜಾತ್ಯತೀತ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ಮಾಡಿದೆ.

ಸಂವಿಧಾನ ಜಾರಿಗೆ ಬಂದ ಕಾರಣದಿಂದಲೇ ನಮ್ಮ ದೇಶದ ಪ್ರತಿಯೊಬ್ಬ ಪ್ರಜೆಗೂ   ಮೂಲಭೂತ ಹಕ್ಕುಗಳು, ಶಿಕ್ಷಣ ಹಕ್ಕುಗಳು, ಧಾರ್ಮಿಕ ಹಕ್ಕುಗಳು ದೊರಕಿವೆ.  ಭಾರತದ ಸಂವಿಧಾನ ರಚನೆಯಲ್ಲಿ‌ ಡಾ.ಬಿ.ಆರ್.ಅಂಬೇಡ್ಕರ್ ಮಹತ್ವದ ಪಾತ್ರ ವಹಿಸಿದ್ದಾರೆ.

ಡಾ.ಬಿ‌.ಆರ್.ಅಂಬೇಡ್ಕರ್ ಅವರು ವಿಶ್ವದ ಹಲವು ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತಕ್ಕೆ ಅಗತ್ಯವಾದ  ಅಂಶಗಳನ್ನು ಭಾರತದ ಸಂವಿಧಾನದಲ್ಲಿ  ಸೇರ್ಪಡೆಗೊಳಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಭಾರತ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ   ವೆಂಕಟರಾಜು, ಕಾರ್ಯನಿತರ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜ ಶಿರವಾರ, ಕನ್ನಡ ಜಾಗೃತ ವೇದಿಕೆ ಅಧ್ಯಕ್ಷ. ನಾಗರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್,  ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ  ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ  ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು,  ಕಸಬಾ ಹೋಬಳಿ ಘಟಕ ಅಧ್ಯಕ್ಷ ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ನಾಗರತ್ನಮ್ಮ, ಮುನಿರಾಜು,   ಷಪೀರ್, ಕೋದಂಡರಾಮ್, ದರ್ಗಾಜೋಗಿಹಳ್ಳಿ ಮಲ್ಲೇಶ್, ದರ್ಶನ್  ಮೊದಲಾದವರು ಭಾಗವಹಿಸಿದ್ದರು.

Exit mobile version