Site icon ಹರಿತಲೇಖನಿ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah inquired about the health of actor Shivraj Kumar

CM Siddaramaiah inquired about the health of actor Shivraj Kumar

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಖ್ಯಾತ ನಟ ಶಿವರಾಜ್ ಕುಮಾರ್ ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

Aravind, BLN Swamy, Lingapura

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಯಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.

ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

Aravind, BLN Swamy, Lingapura
Exit mobile version