ತಿರುವನಂತಪುರ: ನಿನ್ನೆ ನಡೆದ ಗಣರಾಜ್ಯೋತ್ಸವದ ಕಾರ್ಯಕ್ರಮದ ವೇಳೆ ಪೊಲೀಸ್ ಕಮಿಷನರ್ ಒಬ್ಬರು ಹೃದಯಾಘಾತದಿಂದ ಕುಸಿದು ಬಿದ್ದಿರುವ ಘಟನೆ ಕೇರಳದಲ್ಲಿ ನಡೆದಿದ್ದು, ವಿಡಿಯೋ (Video) ವೈರಲ್ ಆಗಿದೆ.
ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ತಿರುವನಂತಪುರ ಸೆಂಟ್ರಲ್ ಸ್ಟೇಡಿಯಂನಲ್ಲಿ ಗಣರಾಜ್ಯೋತ್ಸವದ ಅಂಗವಾಗ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ, ಭದ್ರತೆಗೆ ನಿಂತಿದ್ದ ಪೊಲೀಸ್ ಕಮಿಷನರ್ ಥಾಮ್ಸನ್ ಜೋಸ್ ಏಕಾಏಕಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ವರ್ಗಾವಣೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಎಂದಿನಂತೆ ಕರ್ತವ್ಯ ಮುಂದುವರಿಸಿದರು ಎಂದು ವರದಿಯಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.