ತುಮಕೂರು; ಆಯಿಲ್ ಟ್ಯಾಂಕ್ ಬ್ಲಾಸ್ಟ್ (tank explosion) ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ಬಿಹಾರ ಮೂಲದ ಸಂತೋಷ್ ಹಾಗೂ ಚಂದನ್ ಶರ್ಮ ಮೃತ ದುರ್ದೈವಿಗಳು.
ಮತ್ತೆ ಮೂವರಿಗೆ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಘಟನಾ ಸ್ಥಳಕ್ಕೆ ತುಮಕೂರು ಎಸ್ ಪಿ ಅಶೋಕ್ ಕೆ.ವಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ ಭೇಟಿ ಪರಿಶೀಲನೆ ನಡೆಸಿದ್ದಾರೆ.