ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ರಾಜ್ಯ ಕ್ರೀಡಾಶಾಲೆ /ವಸತಿ ನಿಲಯಗಳಿಗೆ 8ನೇ ತರಗತಿ ಮತ್ತು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಲು ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ (hostel admission) ತಾಲ್ಲೂಕುವಾರು ನಡೆಸಲಾಗುತ್ತಿದೆ.
7ನೇ ತರಗತಿ ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.
ಅಯ್ಕೆ ಪ್ರಕ್ರಿಯೆಯು ಆಯಾ ತಾಲ್ಲೂಕುಗಳಲ್ಲಿ ಫೆಬ್ರುವರಿ 06 ರಂದು ರಂದು ನೆಲಮಂಗಲ ತಾಲ್ಲೂಕಿನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ, ಫೆಬ್ರವರಿ 07 ರಂದು ಹೊಸಕೋಟೆಯ ಶ್ರೀ ಚನ್ನಭೈರೇಗೌಡ ಕ್ರೀಡಾಂಗಣ, ಫೆಬ್ರವರಿ 10 ರಂದು ದೊಡ್ಡಬಳ್ಳಾಪುರದ ‘ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ, ಫೆಬ್ರವರಿ 11ರಂದು ದೇವನಹಳ್ಳಿಯ ಟೌನ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30 ರಂದು ನಡೆಸಲಾಗುತ್ತದೆ.
ಅರ್ಜಿಗಳನ್ನು ಕಛೇರಿಯಲ್ಲಿ ಅಥವಾ ಆಯ್ಕೆ ನಡೆಯುವ ಸ್ಥಳಗಳಲ್ಲಿ (ಕ್ರೀಡಾಂಗಣ) ಪಡೆಯತಕ್ಕದ್ದು.
8ನೇ ತರಗತಿಗೆ ಪ್ರವೇಶ ಪಡೆಯುವವರು 14 ವರ್ಷದೊಳಗಿರಬೇಕು ಹಾಗೂ ಪ್ರಥಮ ಪಿ.ಯು.ಸಿ ಪ್ರವೇಶ ಪಡೆಯುವವರು 17 ವರ್ಷದೊಳಗಿರಬೇಕು.
ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು.
ಕಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 17 ರಂದು ಹಾಗೂ ಹಿರಿಯರ ವಿಭಾಗದ ಆಯ್ಕೆ ಪ್ರಕ್ರಿಯೆ ಫೆಬ್ರವರಿ 18 ರಂದು ಎರಡೂ ವಿಭಾಗದ ಆಯ್ಕೆ ಪ್ರಕ್ರಿಯೆ ಕಂಠೀರವ ಕ್ರೀಡಾಂಗಣ ಬೆಂಗಳೂರಿನಲ್ಲಿ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ 080-29787443 ಮೊ.ಸಂ.9980590960/9632778567 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.