ಬೆಂಗಳೂರು: ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ (Maha Kumbhamela Stampede) ಸಂಭವಿಸಿದೆ.
ಘಟನೆಯಲ್ಲಿ 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 10 ಕ್ಕೂ ಹೆಚ್ಚು ಮಂದಿ ಜೀವಬಿಟ್ಟಿದ್ದಾರೆಂದು ವರದಿಯಾಗಿದೆ.
ಅಲ್ಲದೆ ಕುಂಭಮೇಳದಲ್ಲಿ ಕನ್ನಡಿಗರು ಕೂಡ ಸಿಲುಕಿದ್ದಾರೆ. ಬೆಳಗಾವಿಯ ಇಬ್ಬರು ಗಾಯಗೊಂಡಿದ್ದಾರೆ. ರಾಜ್ಯದಿಂದ ಹೋದವರ ಪೈಕಿ ಐವರು ಸಂಕರ್ಪಕ್ಕೆ ಸಿಕ್ಕಿಲ್ಲ ಎಂದು ವರದಿಯಾಗಿದೆ.
ನಮ್ಮವರ ರಕ್ಷಣೆಗೆ ಕ್ರಮ
ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಟ್ಚಿಟ್ ಮಾಡಿದ್ದು, ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು ಎಂದಿದ್ದಾರೆ.
ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು ಗಾಯಗೊಂಡಿರುವ ಮಾಹಿತಿಯಿದೆ. ಅವರೆಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದೆ.
ಕುಂಭಮೇಳದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂದು ಮನವಿ ಮಾಡಿದ್ದಾರೆ.
ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
— CM of Karnataka (@CMofKarnataka) January 29, 2025
ಕಾಲ್ತುಳಿತದಲ್ಲಿ ರಾಜ್ಯದ ಕೆಲವರು…