Site icon ಹರಿತಲೇಖನಿ

ಹೊಸಕೋಟೆಯಲ್ಲಿ ಪುಷ್ಪ ಸಿನಿಮಾ ಮಾದರಿ ಕ್ರೈಮ್..! 180 ತುಂಡು ರಕ್ತ ಚಂದನ ವಶ

Pushpa movie model crime in Hoskote..!

Pushpa movie model crime in Hoskote..!

ಹೊಸಕೋಟೆ (Hosakote): ತಾಲೂಕಿನ ತಿರುಮಲಶೆಟ್ಟಿಹಳ್ಳಿ (Tirumashetty halli) ಹಾಗೂ ಆಂಧ್ರಪ್ರದೇಶದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ ಮೌಲ್ಯದ 180 ರಕ್ತ ಚಂದನದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ತಿರುಪತಿಯಲ್ಲಿ ರಕ್ತ ಚಂದನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧರಿಸಿ ತಾಲೂಕಿನ ತಿರುಮಲಶೆಟ್ಟಿಹಳ್ಳಿ (Tirumashetty halli) ಠಾಣಾ ವ್ಯಾಪ್ತಿಯಲ್ಲಿ ಶೋಧ ನಡೆಸಿದರು.

ತಿರುಮಲಶೆಟ್ಟಿಹಳ್ಳಿ ಪೊಲೀಸರು ಮತ್ತು ಆಂಧ್ರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಅಡಗಿಸಿಟ್ಟಿದ್ದ ಕೋಟ್ಯಂತರ ರುಪಾಯಿ ಮೌಲ್ಯದ 180 ರಕ್ತಚಂದನ ತುಂಡುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಆಂಧ್ರ ಪೊಲೀಸರ ತನಿಖೆಗೆ ಹೊಸಕೋಟೆ ಪೊಲೀಸರು ಸಾಥ್ ನೀಡಿದ್ದಾರೆ. ಪತ್ತೆಯಾದ ರಕ್ತಚಂದನದ ತುಂಡುಗಳನ್ನು ಆಂಧ್ರ ಪೊಲೀಸರು ತಮ್ಮ ರಾಜ್ಯಕ್ಕೆ ರವಾನಿಸಿದ್ದಾರೆ.

ಬೆಂಗಳೂರು ಗ್ರಾಮಾಂತರಜಿಲ್ಲೆಯ ಹೊಸಕೋಟೆ ತಾಲೂಕಿನ ಕೆಲ ಗ್ರಾಮ ಗಳು ಅಕ್ರಮ ರಕ್ತಚಂದನ ಸಂಗ್ರಹಿಸು ವುದು ಸಾಮಾನ್ಯವಾಗಿದೆ.

ಈ ಬಾರಿ 1 ಕೋಟಿ ಮೌಲ್ಯದ ರಕ್ತಚಂದನ ಕಟ್ಟಿಗೇನಹಳ್ಳಿಯಲ್ಲಿ ಅಡಗಿಸಲು ಸಹಕಾರ ನೀಡಿದವರು ಯಾರು ಎಂದು ಪೊಲೀಸರು ತನಿಖೆ ನಡೆಸಬೇಕಾಗಿದೆ.

Exit mobile version