ಅಮರಾವತಿ: ಖ್ಯಾತ ಚಲನಚಿತ್ರ ನಿರ್ದೇಶಕ-ನಿರ್ಮಾಪಕ ರಾಮ್ ಗೋಪಾಲ್ ವರ್ಮಾ (RGV) ವಿರುದ್ದ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಆರ್‌ಜಿವಿಯನ್ನು ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮತ್ತಿತರರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪದಡಿ ಪ್ರಕರಣ ದಾಖಲಾಗಿದೆ.
ಪೊಲೀಸರು ನೀಡಿದ್ದ ನೋಟಿಸ್ ಅನುಸರಿಸಿ ರಾಮ್ ಗೋಪಾಲ್ ವರ್ಮಾ ಪ್ರಕಾಶಂ ಜಿಲ್ಲೆಯ ಅಮರಾವತಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.
ಆಂಧ್ರದಲ್ಲಿ 2024ರಲ್ಲೇ ಆರ್ ಜಿವಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ.
ಸಿಎಂ ನಾಯ್ಡು, ಡಿಸಿಎಂ-ನಟ ಪವನ್ ಕಲ್ಯಾಣ್ ಮತ್ತು ಅವರ ಕುಟುಂಬ ಸದಸ್ಯರ ಅಸಭ್ಯ ರೀತಿ ಮಾರ್ಫ್ ಮಾಡಿದ ಫೋಟೋಗಳನ್ನು ಜಾಲತಾಣದಲ್ಲಿ ಆರ್‌ಜಿವಿ ಹಂಚಿಕೊಂಡಿದ್ದರು.
ಈ ಪ್ರಕರಣದಲ್ಲಿಯೇ ವರ್ಮಾ ವಿಚಾರಣೆ ನಡೆದಿದೆ. ಇದೇ ಪ್ರಕರಣದಲ್ಲಿ ವರ್ಮಾ ಆಂಧ್ರ ಹೈಕೋಟ್೯ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.