Site icon Harithalekhani

ಜಿಲ್ಲಾಡಳಿತ ಭವನದಲ್ಲಿ ಕಾಯಕ ಶರಣರ ಜಯಂತಿ‌ ಆಚರಣೆ

Kayak Sharan Jayanti celebration at District Administration House

Kayak Sharan Jayanti celebration at District Administration House

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಕಾಯಕ ಶರಣರ’ (Kayaka Sharan) ಜಯಂತಿಯನ್ನು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಕಾಯಕ ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿ, 11 ಮತ್ತು 12 ನೇ ಶತಮಾನವನ್ನು ವಚನ ಚಳುವಳಿಯ ಕಾಲವೇಂದೆ ಕರೆಯುತ್ತಾರೆ.

ಈ ಕಾಲ ಘಟ್ಟದಲ್ಲಿ 200 ಕ್ಕೂ ಹೆಚ್ಚು ವಚನಕಾರರು ಇದ್ದರು. ಮಾದಾರ ಚೆನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಹರಳಯ್ಯ, ಮತ್ತು ಉರಿಲಿಂಗ ಪೆದ್ದಿ ಇವರು ಬಸವಣ್ಣರ ಹಾದಿಯಲ್ಲಿ ನಡೆದು ಬಂದ ಶರಣರು. ಯಾರಿಗೆ ವೇದದ ಅಧ್ಯಯನ ತಿರಸ್ಕರಿಸಿ ಅವರನ್ನು ಅಸಮಾನತೆಯಿಂದ ನೋಡಲಾಗುತ್ತಿತ್ತು ಅಂತಹ ವ್ಯವಸ್ಥೆಯನ್ನು ಬದಲಾಯಿಸಿದ್ದು ಈ ಶರಣರು.

ಸಾವು ಅನ್ನುವಂತದ್ದು ದೇಹಕ್ಕೆ ಮಾತ್ರ ನಮ್ಮ ಆತ್ಮಕ್ಕೆ ಎಂದಿಗೂ ಸಾವಿಲ್ಲ ಎಂದು ತಮ್ಮ ವಚನಗಳ ಮೂಲಕ ಜನರಿಗೆ ತಿಳಿಸಿ ಅವರಲ್ಲಿ ಆತ್ಮವಿಶ್ವಾಸ ಮೂಡಿಸುತ್ತಿದ್ದರು. ಅವರು ತಮ್ಮ ವಚನಗಳಲ್ಲಿ ತಿಳಿಸಿರುವ ಆಶಯಗಳನ್ನು ಅರಿತು ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಜಿಲ್ಲಾಧಿಕಾರಿಗ ಕಚೇರಿ ಸಹಾಯಕ ರಾಜೀವ್ ಸುಲೋಚನಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version