ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (MahaKumbhamela) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಸ್ವಾಗತಿಸಿದರು.
ನಂತರ ಸಂಗಮ ಘಾಟ್ ಗೆ ಆಗಮಿಸಿ ಪವಿತ್ರ ಸ್ನಾನ ಮಾಡಿ ಪುಣ್ಯಭಾಗಿಯಾಗಿದ್ದಾರೆ.
ರಾಷ್ಟ್ರಪತಿ ದೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನದ ಬಳಿಕ ತ್ರಿವೇಣಿ ಸಂಗಮದಲ್ಲಿ ಗಂಗಾ, ಯಮುನಾ ಮತ್ತು ಸರಸ್ವತಿ ನದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ಬಳಿಕ ಅಕ್ಷಯವಟ ಹಾಗೂ ಹನುಮಾನ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಜತೆಗೆ ಡಿಜಿಟಲ್ ಕುಂಭ ಅನುಭವ್ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.
ಭಾರತದ ಮೊದಲ ರಾಷ್ಟ್ರಪತಿ ಡಾ.ರಾಜೇಂದ್ರ ಪ್ರಸಾದ್ ಕೂಡ ಮಹಾ ಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದರು.