Site icon Harithalekhani

ಕಿಡಿಗೇಡಿ ಪೋಸ್ಟ್: ಪೊಲೀಸರ ಮೇಲೆ ಕಲ್ಲು ತೂರಾಟ..!

Slaying the Rowdyseater Barbarians; Arrest of five

Slaying the Rowdyseater Barbarians; Arrest of five

ಮೈಸೂರು (Mysuru): ಇತ್ತೀಚಿಗೆ ನವದೆಹಲಿ ಚುನಾವಣೆ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಯೋರ್ವ ಪೋಸ್ಟ್ ಸಮಾಜದಲ್ಲಿ ಅಶಾಂತಿಗೆ ಕಾರಣವಾಗಿದೆ.

ಫಲಿತಾಂಶ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್ ಒಂದರಲ್ಲಿ ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಸೇರಿದಂತೆ ಅನೇಕರ ಭಾವಚಿತ್ರವನ್ನು ಕಿಡಿಕೇಡಿ ಯುವಕನೋರ್ವ ವ್ಯಂಗ್ಯವಾಗಿ ಪೋಸ್ಟ್ ಮಾಡಿದ್ದಾನೆ.

ಈ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಪೋಸ್ಟ್ ನಲ್ಕಿ ಮುಸ್ಲಿಂ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಸಾವಿರಾರು ಜನರು ಸೋಮವಾರ ರಾತ್ರಿ ಉದಯಗಿರಿ ಪೊಲೀಸ್ ಠಾಣೆ ಮುತ್ತಿಗೆ ಹಾಕಿದರು.

ಈ ವೇಳೆ ಸಮುದಾಯದ ಮುಖಂಡರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮಾತನಾಡುವಾಗ ಏಕಾಏಕಿ ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದಾಗ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿ, ಅಶ್ರುವಾಯು ಸಿಡಿಸಿದ್ದಾರೆ. ಈ ವೇಳೆ ಮುಸ್ಲಿಂ ಸಮುದಾಯದ ಮುಖಂಡರು ಯುವಕರ ಶಾಂತಿ ಕಾಪಾಡುವಂತೆ ಮನವರಿಕೆ ಮಾಡಿದ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ.

ಈ ವೇಳೆ ಕೆಎಸ್‌ಆರ್ ಪಿ ಹಾಗೂ ಸಿಎಆ‌ರ್ ಪೊಲೀಸರಿಗೆ ಗಾಯಗಳಾಗಿದ್ದು, ಪೊಲೀಸ್ ವಾಹನದ ಗಾಜುಗಳು ಒಡೆದಿವೆ.

ಕಲ್ಲು ತೂರಿದವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಠಾಣೆಯ ಸುತ್ತ ಪೊಲೀಸ್ ನಿಯೋಜಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲಾಗಿದೆ ಎಂದು ವರದಿಯಾಗಿದೆ.

Exit mobile version