ಬೆಂಗಳೂರು: ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ (Murder) ಅಂತ್ಯವಾಗಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಹೊಸೂರು ಸರ್ವಿಸ್ ರಸ್ತೆಯ ಸಿಂಗಸಂದ್ರದಲ್ಲಿ ನಡೆದಿದೆ.
40 ವರ್ಷದ ಜಗದೀಶ್ ಕೊಲೆಯಾದ ವ್ಯಕ್ತಿಯಾಗಿದ್ದು, ಸಿದ್ದೇಶ್ ಎಂಬ ಹತ್ಯೆ ಆರೋಪಿ.
ಇಬ್ಬರು ಸಿಂಗಸಂದ್ರ ಬಳಿ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದರಂತೆ. ಸಿದ್ದೇಶ್ ಹಾಗೂ ಜಗದೀಶ್ ನಡುವೆ ಕುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಇದು ಅತಿರೇಕ ಮಾಡಿಕೊಂಡು ಜಗದೀಶ್ ಮೇಲೆ ಕಲ್ಲು ಎತ್ತಿ ಹಾಕಿ ಸಿದ್ದೇಶ್ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಆರೋಪಿ ಸಿದ್ದೇಶ್ ರನ್ನ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.