Site icon Harithalekhani

ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಇನ್ನಿಲ್ಲ..!

Satyendra Das, the head priest of Ayodhya Sri Ram Mandir is no more..!

Satyendra Das, the head priest of Ayodhya Sri Ram Mandir is no more..!

ಲಖನೌ: ಅಯೋಧ್ಯೆಯ (Ayodhya) ಶ್ರೀರಾಮ ಮಂದಿರದ ಪ್ರಧಾನ ಅರ್ಚಕರಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್ (Satyendra Das) ಅವರು ಬುಧವಾರ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದ ಕಾರಣ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಚಿಕಿತ್ಸೆ ಒಡೆಯುತ್ತಿದ್ದ ಆಚಾರ್ಯರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ಬಾಬರಿ ಮಸೀದಿಯನ್ನು ಕೆಡವಿದ ಸಂದರ್ಭದಿಂದ ಸತ್ಯೇಂದ್ರ ದಾಸ್ ಅವರು ತಾತ್ಕಾಲಿಕವಾಗಿ ರಾಮ ಮಂದಿರದ ಅರ್ಚಕರಾಗಿದ್ದರು.

ಶ್ರೀರಾಮನ ಪರಮ ಭಕ್ತ, ಅಯೋಧ್ಯಯ ರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ಕುಮಾ‌ರ್ ದಾಸ್ ಜಿ ಮಹಾರಾಜ್ ಅವರ ನಿಧನವು ಅತ್ಯಂತ ದುಃಖಕರ ಮತ್ತು ಆಧ್ಯಾತ್ಮಿಕ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version