Site icon Harithalekhani

ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ ಬಿವೈ ವಿಜಯೇಂದ್ರ

BY Vijayendra took holy bath at Mahakumbha Mela

BY Vijayendra took holy bath at Mahakumbha Mela

ಪ್ರಯಾಗ್‌ರಾಜ್‌: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Viayendra) ಅವರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbhamela) ಪಾಲ್ಗೊಂಡು ತಿವೇಣಿ ಸಂಗಮದಲ್ಲಿ ಪವಿತ್ರಾ, ಸ್ನಾನ ಮಾಡಿದರು.

ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಪುನೀತ ಭಾವ ಮೂಡಿಸಿತು ಎಂದು ಅಭಿಪ್ರಾಯಪಟ್ಟರು.

ಜಾಗತಿಕ ಶಾಂತಿಗಾಗಿ, ದೇಶದ ಕಲ್ಯಾಣಕ್ಕಾಗಿ ಕರುನಾಡ ಜನರ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಈ ಕುಂಭಮೇಳ ಫೆ.28ರ ಕೊನೆಯ ದಿನದವರೆಗೂ ಹರಿದು ಬರುವ ಭಕ್ತ ಸಾಗರಕ್ಕೆ ಪುಣ್ಯ ಲಭಿಸಲಿ, ಯಾವುದೇ ಅವಘಡಗಳು ಸಂಭವಿಸದಿರಲೆಂದು ಪ್ರಾರ್ಥಿಸಿದರು.

ಇದೇ ವೇಳೆ ವಿಜಯೇಂದ್ರ ಅವರು ಋಷಿ ಮುನಿಗಳ ಆಶೀರ್ವಾದ ಪಡೆದುಕೊಂಡರು.

Exit mobile version