Harithalekhani

Doddaballapura: ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ.. ಬಿ ಮುನೇಗೌಡರಿಂದ ಮಜ್ಜಿಗೆ ವಿತರಣೆ

Doddaballapura: Distribution of buttermilk by B Munegowda

ದೊಡ್ಡಬಳ್ಳಾಪುರ (Doddaballapura); ನಗರದ ಇತಿಹಾಸ ಪ್ರಸಿದ್ದ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವವು ನಗರದ ತೇರಿನ ಬೀದಿಯಲ್ಲಿ ಗುರುವಾರ ವಿಜೃಂಭಣೆಯಿಂದ ನಡೆಯಿತು.

ರಾಜ್ಯದ ವಿವಿದೆಡೆಗಳಿಂದ ಬಂದಿದ್ದ ಸಹಸ್ರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಗಳಿಂದ ರಥಕ್ಕೆ ಹಣ್ಣು ದವನ ಅರ್ಪಿಸಿ ಧನ್ಯತೆ ಮೆರೆದರು.

ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ಕಲ್ಯಾಣೋತ್ಸವ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.

ಮಜ್ಜಿಗೆ ಪ್ಯಾಕೆಟ್ ವಿತರಣೆ

ಬ್ರಹ್ಮರಥೋತ್ಸವಕ್ಕೆ ಬಂದಿದ್ದ ಭಕ್ತರಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ ಮುನೇಗೌಡ ಅವರು ಮಜ್ಜಿಗೆ ವಿತರಣೆ ವ್ಯವಸ್ಥೆ ಮಾಡಿದ್ದರು.

ಬಿಸಿಲ ಬೇಸಗೆಯಲ್ಲಿ ಬಸವಳಿದಿದ್ದ ಸಾವಿರಾರು ಭಕ್ತರು ಇದರ ಪ್ರಯೋಜನ ಪಡೆದರು.

ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ, ತಾಲೂಕು ಲಕ್ಷ್ಮೀಪತಯ್ಯ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶಾಂತಮ್ಮ, ಪ್ರಧಾನ ಕಾರ್ಯದರ್ಶಿಗಳಾದ ಜಗನಾಥ್ ಕೆ., ಟಿಎಪಿಎಂಸಿಎಸ್ ಉಪಾಧ್ಯಕ್ಷ ಕಂಚಿಗನಾಳ ಲಕ್ಷ್ಮೀನಾರಾಯಣ್, ವಕ್ತಾರ ಕುಂಟನಹಳ್ಳಿ ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷ ಜಗದೀಶ್ ರೆಡ್ಡಿ, ಮಹಿಳಾ ಮುಖಂಡರಾದ ಜ್ಯೋತಿ. ಶಶಿಕಲ ಮತ್ತಿತರರಿದ್ದರು.

Exit mobile version