Site icon Harithalekhani

ಗಮನಿಸಿ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗಾಗಿ ಅರ್ಜಿ ಆಹ್ವಾನ

Applications invited for Horticulture Training

Applications invited for Horticulture Training

ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿಯಲ್ಲಿ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ (Application Invitation for Recruitment).

ಹೊಸಕೋಟೆ ಟೌನ್ ನಗರಸಭೆಯಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ಹುದ್ದೆ-01, ಹೊಸಕೋಟೆ ತಾಲೂಕಿನ ದೇವನಗುಂದಿ ಗ್ರಾಮ ಪಂಚಾಯಿತಿ.

ನೆಲಮಂಗಲ ತಾಲ್ಲೂಕಿನ ದೊಡ್ಡಬೆಲೆ, ನರಸೀಪುರ, ಸೋಲದೇವನಹಳ್ಳಿ ಹಾಗೂ ಹಸಿರುವಳ್ಳಿ ಗ್ರಾಮ ಪಂಚಾಯಿತಿ.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ, ಹೊನ್ನಾವರ ಹಾಗೂ ಕೊನಘಟ್ಟ ಗ್ರಾಮ ಪಂಚಾಯಿತಿ.

ದೇವನಹಳ್ಳಿ ತಾಲ್ಲೂಕಿನ ಅವತಿ ಗ್ರಾಮ ಪಂಚಾಯಿತಿಗಳಿಗೆ ತಲಾ ಒಂದು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವ್ಯಕ್ತಿಗಳು ಷರತ್ತುಗಳಿಗೆ ಒಳಪಟ್ಟು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಮಾರ್ಚ್ 14 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ನಂ 01, ನೆಲಮಹಡಿ, ಜಿಲ್ಲಾಡಳಿತ ಭವನ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಷರತ್ತುಗಳು

Exit mobile version