ನವದೆಹಲಿ: ಶನಿವಾರ ರಾತ್ರಿ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ (stampede) 18 ಮಂದಿ ಮೃತಪಟ್ಟಿದ್ದಾರೆ.
ಮೃತರಲ್ಲಿ ಮೂವರು ಮಕ್ಕಳು ಸೇರಿದಂತೆ ಮಹಿಳೆಯರು ಇದ್ದಾರೆ. ಇವರ ಮೃತದೇಹಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ಪೈಕಿ ಮೂವರ ಮೃತದೇಹಗಳ ಗುರುತು ಪತ್ತೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
नई दिल्ली रेलवे स्टेशन पर "जो गिरा वो दबता चला गया जो इंजन के सामने गिरा वो कटता चला गया।"
— Anjali (@anju1608) February 16, 2025
आज तक पर लोग "200 मौतें" बता रहे हैं हालंकि रेलवे ने कहा है कि सिर्फ 15 लोगों की मौत हुई बाकी बेहोश है सच्चाई का इंतजार है।#NewDelhiRailwaystation#delhistampede pic.twitter.com/U663KVSaNB
ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.