Site icon Harithalekhani

Video: ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ.. 18 ಮಂದಿ ಸಾವು

Stampede at Delhi Railway Station

Stampede at Delhi Railway Station

ನವದೆಹಲಿ: ಶನಿವಾರ ರಾತ್ರಿ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತದಲ್ಲಿ (stampede) 18 ಮಂದಿ ಮೃತಪಟ್ಟಿದ್ದಾರೆ.

ಮೃತರಲ್ಲಿ ಮೂವರು ಮಕ್ಕಳು ಸೇರಿದಂತೆ ಮಹಿಳೆಯರು ಇದ್ದಾರೆ. ಇವರ ಮೃತದೇಹಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಈ ಪೈಕಿ ಮೂವರ ಮೃತದೇಹಗಳ ಗುರುತು ಪತ್ತೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.

ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Exit mobile version