ನವದೆಹಲಿ; ರೈಲು ನಿಲ್ದಾಣದಲ್ಲಿ ಕಳೆದ ರಾತ್ರಿ ಸಂಭವಿಸಿದ ಕಾಲ್ತುಳಿತ (stampede) ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಕಾಲ್ತುಳಿತದಲ್ಲಿ ಮೃತಪಟ್ಟ 18ಮಂದಿಯ ಕುಟುಂಬಗಳಿಗೆ ರೈಲ್ವೇ ಇಲಾಖೆ ಪರಿಹಾರ ಘೋಷಣೆ ಮಾಡಿದೆ.
ಶನಿವಾರ (ಫೆ.15) ರಾತ್ರಿ ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಉಸಿರುಗಟ್ಟಿ ಸ್ಥಳದಲ್ಲೇ ಕುಸಿದುಬಿದ್ದರೆ ಇನ್ನು ಹಲವರು ಗಂಭೀರವಾಗಿ ಗಾಯಗೊಂಡಿದ್ದರು.
ಕಾಲ್ತುಳಿತದಲ್ಲಿ ಮೂವರು ಮಕ್ಕಳು, ಹತ್ತು ಮಹಿಳೆಯರು ಹಾಗೂ ಮೂವರು ಪುರುಷರು ಮೃತಪಟ್ಟಿದ್ದಾರೆ.