ದೊಡ್ಡಬಳ್ಳಾಪುರ (Doddaballapura): ಅಖಿಲ ಭಾರತ ನಾಗರಿಕ ಸೇವಾ ಕ್ರಿಕೆಟ್ ತಂಡಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದೊಡ್ಡಬಳ್ಳಾಪುರದ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ ಆಯ್ಕೆಯಾಗಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಜಾಹಿರಾಗಟ್ಟಿನ ಮಹಾಲ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರಿಕೆಟ್ ತಂಡದ ಕೋಚ್ ಹಾಗೂ ವ್ಯವಸ್ಥಾಪಕ ಸೇರಿ 18 ಕ್ರೀಡಾಪಟುಗಳಲ್ಲಿ ಬಿ.ವಿ.ರಾಘವೇಂದ್ರ ಆಯ್ಕೆಯಾಗಿದ್ದು, ರಾಜ್ಯದ ವಿವಿಧ ತಂಡಗಳಲ್ಲಿ ಪ್ರತಿಭಾವಂತ ಕ್ರಿಕೆಟ್ ಆಟಗಾರರನ್ನು ಆಯ್ಕೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಅವರು ರಾಷ್ಟ್ರಮಟ್ಟದ ಕ್ರಿಕೆಟ್ ಲೀಗ್ ನಲ್ಲಿ ಭಾಗವಹಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಅಬಕಾರಿ ಇನ್ಸ್ಪೆಕ್ಟರ್ ಬಿ.ವಿ.ರಾಘವೇಂದ್ರ ಅವರನ್ನು ಅಭಿನಂದಿಸಲಾಯಿತು.
ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಸ್. ರಾಜಶೇಖರ್ ಹಾಗೂ ಪದಾಧಿಕಾರಿಗಳು ಇದ್ದರು