ದೊಡ್ಡಬಳ್ಳಾಪುರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbhamela) ದೊಡ್ಡಬಳ್ಳಾಪುರ ಬಿಜೆಪಿ ಹಿರಿಯ ಮುಖಂಡ ಹೆಚ್‌ಎಸ್ ಅಶ್ವಥ್ ನಾರಾಯಣ ಕುಮಾರ್ (HS Ashwath Narayan Kumar) ಅವರು ತ್ರಿವೇಣಿ ಸಂಗಮದಲ್ಲಿ ಇಂದು ಪವಿತ್ರ ಸ್ನಾನ ಮಾಡಿದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸಮಸ್ತ ಜನರ ಆಶೋತ್ತರಗಳನ್ನು ಧರ್ಮ ರೀತಿಯಲ್ಲಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಕೈಗೊಳ್ಳಲಾಗಿದೆ ಎಂದರು.
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳವನ್ನು ಇಡೀ ಜಗತ್ತು ನೋಡುತ್ತಿದೆ.
ವಿವಿಧ ರಾಜ್ಯಗಳಿಂದ ಮಾತ್ರವಲ್ಲದೆ ಜಗತ್ತಿನ ಮೂಲೆ ಮೂಲೆಯಿಂದ ಜನ ಇಲ್ಲಿಗೆ ಬಂದು ಪವಿತ್ರ ಸ್ನಾನ ಮಾಡುವ ಮೂಲಕ ಮಹಾಕುಂಭ ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.