ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀ ಸಂತ ಸೇವಾಲಾಲ್ ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞ ‘ ಜಯಂತಿಯನ್ನು (Jayanti celebration) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಶ್ರೀ ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಹಾಗೂ ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.