Site icon Harithalekhani

ತೆಲಂಗಾಣ ಬೆನ್ನಲ್ಲೇ ಕರ್ನಾಟಕದಲ್ಲಿ 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು..!

10th class student died of heart attack..!

10th class student died of heart attack..!

ತುಮಕೂರು: ಚಿಕ್ಕ ಚಿಕ್ಕ ಮಕ್ಕಳಿಗೆ ಹೃದಯಾಘಾತ (heart attack) ಸಂಭವಿಸುತ್ತಿರುವುದು ಪೋಷಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಶುಕ್ರವಾರವಷ್ಟೇ ತೆಲಂಗಾಣದಲ್ಲಿ 10 ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನಪ್ಪಿರುವ ಬೆನ್ನಲ್ಲೇ, ಇಂದು ಕರ್ನಾಟಕದಲ್ಲಿ ಕೂಡ 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನಪ್ಪಿದ್ದಾನೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಭೈರಾಪುರ ಗ್ರಾಮದ 16 ವರ್ಷದ ರಾಹುಲ್ ಹೃದಯಾಘಾತ ಪರಿಣಾಮ ಸಾವನಪ್ಪಿರುವ ವಿದ್ಯಾರ್ಥಿಯಾಗಿದ್ದಾನೆ.

ಭೈರಾಪುರ ಗ್ರಾಮದ ಜಯರಾಂ ಪುತ್ರ ರಾಹುಲ್ ಚಿಕ್ಕನಾಯಕನಹಳ್ಳಿ ಪಟ್ಟಣದ ಜಿಎಚ್‌ಎಸ್‌ನಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಶುಕ್ರವಾರ ಶಾಲೆಗೆ ಹೋಗಿ ಮನೆಗೆ ವಾಪಸ್ ಬಂದಿದ್ದ ರಾಹುಲ್‌ಗೆ ರಾತ್ರಿ 9:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದೆ.

ಕೂಡಲೇ ರಾಹುಲ್‌ನನ್ನು ಪೋಷಕರು ಹುಳಿಯಾರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆಂದು ವರದಿಯಾಗಿದೆ. heart attack

ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version