Site icon Harithalekhani

KSRTC: ಪುರುಷರ ಸೀಟು ಪುರುಷರಿಗೇ ಮೀಸಲು

Second PUC exam from tomorrow

Second PUC exam from tomorrow

ಮೈಸೂರು: ಬಸ್ಸುಗಳಲ್ಲಿ ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ (KSRTC) ಸೂಚನೆ ನೀಡಿದೆ.

ಶಕ್ತಿ ಯೋಜನೆ ಜಾರಿಯಾದ ಬಳಿಕ ಸರಕಾರಿ ಸಾರಿಗೆ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಹಣ ನೀಡಿ ಟಿಕೆಟ್ ಪಡೆಯುವ ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್‌ಆರ್‌ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು ಈಗ ಬೆಳಕಿಗೆ ಬಂದಿದೆ.

ಪುರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳೆಯರು ಕುಳಿತು ಪ್ರಯಾಣಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗುತ್ತಿದೆ.

ಮೈಸೂರು ನಗರ ಸಾರಿಗೆ ವಾಹನಗಳಲ್ಲಿನ ಮರುಷರಿಗೆ ಮೀಸಲಿರುವ ಆಸನಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳುತ್ತಿದ್ದು, ಪುರುಷ ಪ್ರಯಾಣಿಕರಿಗೆ ಆಸನಗಳು ಸಿಗುವುದಿಲ್ಲವೆಂದು ವಿಷ್ಣುವರ್ಧನ.ಎಸ್ ಎಂಬುವವರು ಕೇಂದ್ರ ಕಚೇರಿಗೆ ದೂರು ಸಲ್ಲಿಸಿದ್ದರು.

ಅದರಂತೆ ತಮ್ಮ ಘಟಕಗಳಿಂದ ಕಾರ್ಯಾಚರಣೆಯಾಗುವ ಎಲ್ಲ ವಾಹನಗಳಲ್ಲಿ ಪುರುಷ ಪ್ರಯಾಣಿಕರಿಗೆ ಮೀಸಲಿಸಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಕುಳಿತು ಪ್ರಯಾಣ ಮಾಡಲು ಕ್ರಮಕೈಗೊಳ್ಳುವಂತೆ ಎಲ್ಲ ಚಾಲನಾ ಸಿಬ್ಬಂದಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಅಲ್ಲದೆ ತೆಗೆದುಕೊಂಡ ಕ್ರಮದ ಉರಿತು ಅನುಸರಣಾ ವರದಿ ಕಳುಹಿಸಬೇಕು ಎಂದು ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

Exit mobile version